Subject Format :Pdf/JPEG
Subject Size:9545kb
Pages :03
Scanned Copy : Yes
Editable Text : NO
Password Protected : NO
Download Link : Yes
Copy Text : NO
Print Enable : Yes
Quality : High
Subject Size Reduced:No
Password : NO
Cost : Free
For Personal Use only
ಬೆಂಗಳೂರು: ತಳವಾರ ಹಾಗೂ ಪರಿವಾರ ಸಮುದಾಯಗಳನ್ನು(Talavara and Parivara communities) ಒಬಿಸಿ ಪಟ್ಟಿಯಿಂದ ತೆಗೆದುಹಾಕಲಾಗಿದೆ.
ಕೇಂದ್ರ ಸರ್ಕಾರ 2020ರ ಮಾ.19ರಂದು ತಳವಾರ ಮತ್ತು ಪರಿವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯಪತ್ರ ಹೊರಡಿಸಿತ್ತು. ಆದ್ರೆ, ಕೆಲ ಗೊಂದಲಗಳು ಸೃಷ್ಟಿಯಾಗಿದ್ದವು. ಕೇಂದ್ರ ಸರಕಾರವು ಕಳೆದ ಮಾರ್ಚ್‌ನಲ್ಲಿ ಪ್ರಕಟಿಸಿದ ಗೆಜೆಟಿಯರ್‌ನಲ್ಲಿ ನಾಯಕದ, ನಾಯಕ್ ಪರ್ಯಾಯ ಪದಗಳಾದ ಪರಿವಾರ ಹಾಗೂ ತಳವಾರ ಜಾತಿಗಳನ್ನು ಒಳಗೊಂಡಂತೆ ಪರಿಶಿಷ್ಟ ಪಂಗಡಕ್ಕೆ ಸೇರಿದ ಜನರಿಗೆ ಪರಿಶಿಷ್ಟ ವರ್ಗದ ಜಾತಿ ಪ್ರಮಾಣ ಪತ್ರ ನೀಡಬಹುದು ಎಂದು ಹೇಳಿತ್ತು.
ಇನ್ನು ರಾಜ್ಯ ಸರ್ಕಾರ ಕಳೆದ ಜೂನ್‌ನಲ್ಲಿ ಹೊರಡಿಸಿದ ಸುತ್ತೋಲೆ ಹಾಗೂ ಆಗಸ್ಟ್‌ನಲ್ಲಿ ಹೊರಡಿಸಿದ ಅಧಿಸೂಚನೆಯಲ್ಲಿ ಪರಿಶಿಷ್ಟ ಪಂಗಡದ ಪರಿವಾರ ಹಾಗೂ ತಳವಾರ ಜಾತಿಗಳಿಗೆ ಜಾತಿ ಪ್ರಮಾಣ ಪತ್ರ ನೀಡಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡಲಾಗಿತ್ತು. ಆದರೂ ಈ ವರ್ಗಗಳಿಗೆ ಸೇರಿದ ವ್ಯಕ್ತಿಗಳು ಜಾತಿ ಪ್ರಮಾಣ ಪತ್ರ ಪಡೆಯಲು ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ಸ್ಪಷ್ಟನೆ ನೀಡಿತ್ತು,
ನಿಯಾಮನುಸಾರ ನೈಜವಾದ ಪರಿಶಿಷ್ಟ ಪಂಗಡದ ಜಾತಿಗೆ ಸೇರಿದ ಪರಿವಾರ ಹಾಗೂ ತಳವಾರ ಜಾತಿ ವ್ಯಕ್ತಿಗಳಿಗೆ ಯಾವುದೇ ತೊಂದರೆಯಾಗದಂತೆ ಹಾಗೂ ನಿಗದಿತ ಅವಧಿಯೊಳಗೆ ಜಾತಿ ಪ್ರಮಾಣ ಪತ್ರ ನೀಡುವಂತೆ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಸಮಾಜ ಕಲ್ಯಾಣ ಇಲಾಖೆ ಸೂಚಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
No comments:
Post a Comment
If You Have any Doubts, let me Comment Here