JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Monday, November 21, 2022

The new official image of Karnataka Mata is mandatory for use in all government offices, schools and colleges

  Jnyanabhandar       Monday, November 21, 2022
Subject: The new official image of Karnataka Mata is mandatory for use in all government offices, schools and collegesರ್ನಾಟಕ ರಾಜ್ಯೋತ್ಸವ, ವಿವಿಧ ಕಾರ್ಯಕ್ರಮಗಳಲ್ಲಿ ವಿಭಿನ್ನ ರೀತಿಯಲ್ಲಿ ಕರ್ನಾಟಕ ಮಾತೆಯ (ನಾಡದೇವಿಯ) ಚಿತ್ರಗಳಿರುವುದನ್ನು ಗಮನಿಸಿದ ರಾಜ್ಯ ಸರ್ಕಾರ ಇದೀಗ ಕರ್ನಾಟಕ ಮಾತೆಯ ಹೊಸ ಚಿತ್ರವನ್ನು ಅಧಿಕೃತಗೊಳಿಸಿ ಆದೇಶ ಹೊರಡಿಸಿದೆ.

ಕರ್ನಾಟಕದ ಕಲೆ, ಸಂಸ್ಕೃತಿಯನ್ನು ಬಿಂಬಿಸುವ ಚಿತ್ರವನ್ನು ಐವರು ಕಲಾವಿದರ ಸಮಿತಿಯ ಒಪ್ಪಿಗೆ ಮೇರೆಗೆ ಅಧಿಕೃತಗೊಳಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶಿಸಿದೆ.


ಇನ್ನು ಮುಂದೆ ಎಲ್ಲ ಸರ್ಕಾರಿ ಕಾರ್ಯಕ್ರಮಗಳಲ್ಲಿ, ಶಾಲಾ ಕಾಲೇಜುಗಳ ಗೋಡೆಯ ಮೇಲೆ ಈ ಚಿತ್ರವನ್ನೇ ಕಡ್ಡಾಯವಾಗಿ ಬಳಸುವಂತೆ ತಿಳಿಸಲಾಗಿದೆ.

ಅಧಿಕೃತ ಚಿತ್ರದಲ್ಲಿ ಕರ್ನಾಟಕದ ಸಾಂಪ್ರದಾಯಿಕ ಕಲೆಯನ್ನು ಬಿಂಬಿಸುವ ಹಾಗೂ ನಾಡಗೀತೆಯಲ್ಲಿರುವ ಕೆಲವು ಅಂಶಗಳನ್ನು ಸಾಂಕೇತಿಕವಾಗಿ ಬಳಸಲಾಗಿದೆ.

 • ನಾಡದೇವತೆಯ ಹಿನ್ನೆಲೆಯಲ್ಲಿ ಕರ್ನಾಟಕದ ನಕ್ಷೆ ಇರುತ್ತದೆ.
 • ಮುಖದಲ್ಲಿ ಸ್ವಾಭಾವಿಕ ಸೌಂದರ್ಯ ಮತ್ತು ದೈವಿ ಭಾವವಿದೆ
 • ದ್ವಿಭುಜ ಅಂದರೆ ಎರಡು ಕೈಗಳು ವಾಸ್ತವಿಕತೆಗೆ ಹತ್ತಿರವಾಗಿದೆ.
 • ಬಲಗೈಯಲ್ಲಿ ಅಭಯ ಮುದ್ರೆ ಸಾಂಕೇತಿಕವಾಗಿ ರಕ್ಷಣೆ ನೀಡುತ್ತಿದ್ದರೆ, ಎಡಗೈಯಲ್ಲಿರುವ ತಾಳೆಗರಿ ಕನ್ನಡ ಭಾಷಾ ಸಂಪತ್ತು, ಜ್ಞಾನ ಸಮೃದ್ಧಿಯನ್ನು ಪ್ರವಹಿಸುವ ನಿಟ್ಟನ್ನು ಸೂಚಿಸುತ್ತಿದೆ.


 • ನಾಡದೇವತೆಯು ಕುಳಿತಿರುವ ಭಂಗಿಯು ಭವ್ಯತೆಯನ್ನು ಹಾಗೂ ಸಾಕ್ಷ್ಯತೆಯನ್ನು ಪ್ರತಿಬಿಂಬಿಸುತ್ತಿದೆ.
 • ಕರ್ನಾಟಕದ ಧ್ವಜ ಕನ್ನಡಾಭಿಮಾನದ ಸಂಕೇತವಾಗಿ ರಾರಾಜಿಸುತ್ತಿದೆ.
 • ಹಸಿರು ಸೀರೆಯು ಸಿರಿ ಸಂಪದ ಸಮೃದ್ಧಿಯನ್ನು ಸೂಚಿಸುತ್ತಿದೆ.
 • ಕರ್ನಾಟಕದ ಭವ್ಯ ವೈಶಿಷ್ಟ್ಯವನ್ನು ಸಾರುವ ಆಭರಣಗಳು ನಮ್ಮ ನಾಡನ್ನು ಆಳಿದ ಸಾಮ್ರಾಜ್ಯಗಳ ವೈಭವವನ್ನು ಸಾರುತ್ತಿವೆ.


 • ಚಾಲುಕ್ಯರ ಕಾಲದ ಕರಂಡ ಮುಕುಟೋಪಾದಿಯಲ್ಲಿ ಕಿರೀಟ, ಕಿವಿಯಲ್ಲಿ ಸುಂದರ-ಕೌಶಲ್ಯ ಕರ್ಣಪರ್ಯಗಳು, ಭುಜದ ಮೇಲೆ ಕರ್ನಾಟಕ ವೈಶಿಷ್ಟ್ಯದ ಸಿಂಹ ಲಾಂಛನ ಭುಜಕೀರ್ತಿಗಳು, ಕುತ್ತಿಗೆಯಲ್ಲಿ ಕಂಠಿ, ಕಟ್ಟಾಣಿ, ಹಾರಗಳು, ಕರ್ನಾಟಕ ಲಾಂಛನ - ಗಂಡ ಭೇರುಂಡ ಪದಕ, ಕಟಿಯ ಆಭರಣವಾದ ಬೆಳ್ಳಿಯ ಡಾಬು, ಕಟಿಯಲ್ಲಿ ಕೀರ್ತಿಮುಖ ಲಾಂಛನದ ವಡ್ಯಾಣ, ಉದ್ದನೆಯ ವೈಜಯಂತಿ ಹಾರ, ನಡುವೆ ಹೊಯ್ಸಳ ಲಾಂಛನದ ಪದಕ ನಾಡದೇವತೆಯನ್ನು ಅಲಂಕರಿಸಿದೆ. ಕಾಲಿನಲ್ಲಿ ಕಡಗ, ಋಳಿ ಮತ್ತು ಕಾಲುಂಗುರಗಳು, ಹಣೆಯ ಲಲಾಟ ತಿಲಕ, ಶಿರದಲ್ಲಿ ಮುಡಿದಿರುವ ಹೂವು ಸೌಭಾಗ್ಯದ್ಯೋತಕಗಳಾಗಿವೆ. ತೆಳುವಾದ-ಮೃದುವಾದ ಹೂವಿನ ತೋಮಾಲೆಯು ನಾಡದೇವತೆಯ ಸಂಪೂರ್ಣ ಅಲಂಕಾರಕ್ಕೆ ಒಂದು ರೀತಿಯ ಮೆರಗು ನೀಡಿದೆ. ಕೆಳಗೆ ಸುಂದರ ಸದೃಢ ತಾವರೆ ಹೂವು(ಕಮಲ) ದೇವಿಯ ಮೃದುವಾದ ಕಾಲುಗಳಿಗೆ ಆಸರೆ ನೀಡಿದೆ.
 • ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟ, ಸಸ್ಯಕಾಶಿಯ ಸೊಬಗನ್ನು ಚಿತ್ರಿಸಲಾಗಿದೆ.
 • ಸದ್ಯ ಕರ್ನಾಟಕದಲ್ಲಿ ವಿಭಿನ್ನ ಚಿತ್ರಗಳನ್ನು ಬಳಸಿಕೊಳ್ಳಲಾಗುತ್ತಿದೆ. ಅತಿ ಹೆಚ್ಚು ಪ್ರಮಾಣದಲ್ಲಿ ಖ್ಯಾತ ಕಲಾವಿದ ಬಿ.ಕೆ.ಎಸ್‌. ವರ್ಮ ಅವರ ಚಿತ್ರವನ್ನು ಬಳಸಲಾಗುತ್ತಿತ್ತು. ಇದೀಗ ಹೊಸ ಚಿತ್ರವನ್ನು ಸಮಿತಿಯು ಸೂಚಿಸಿದಂತೆ ಕೆ. ಸೋಮಶೇಖರ್‌ (ಚಿತ್ರ ಸೋಮು) ರಚಿಸಿದ್ದಾರೆ.

  ಈ ಕುರಿತು ʼವಿಸ್ತಾರ ನ್ಯೂಸ್‌ʼಗೆ ಪ್ರತಿಕ್ರಿಯೆ ನೀಡಿರುವ, ಹಿಂದಿನ ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಹಾಗೂ ಪ್ರಸ್ತುತ ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ನಿರ್ದೇಶಕ ಡಿ. ಮಹೇಂದ್ರ, ಕರ್ನಾಟಕದ ಕಲೆ, ಸಂಸ್ಕೃತಿ, ವಾಸ್ತುಶಿಲ್ಪವನ್ನು ಪ್ರತಿಬಿಂಬಿಸುವಂತೆ ಚಿತ್ರವನ್ನು ರಚಿಸಲು ಸಮಿತಿ ಸಲಹೆ ನೀಡಿತ್ತು. ಅದರಂತೆ ಕಲಾವಿದರು ರಚಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

  ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಡಿ.ಮಹೇಂದ್ರ ನೇತೃತ್ವದ ಸಮಿತಿ ನೀಡಿದ ಶಿಫಾರಸನ್ನು ಸರ್ಕಾರ ಒಪ್ಪಿಕೊಂಡಿದೆ. ಬೆಂಗಳೂರು ವಿವಿ ಆವರಣದಲ್ಲಿ ಸ್ಥಾಪಿಸುವ ನಾಡದೇವಿ ಪ್ರತಿಮೆ ಇದೇ ಆಗಿರುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ

logoblog

Thanks for reading The new official image of Karnataka Mata is mandatory for use in all government offices, schools and colleges

Previous
« Prev Post

No comments:

Post a Comment

If You Have any Doubts, let me Comment Here