JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Wednesday, July 19, 2023

Gruha Lakshmi Scheme Application Registration

  Jnyanabhandar       Wednesday, July 19, 2023
Subject: Gruha Lakshmi Scheme Application Details

ಕರ್ನಾಟಕ ಸರ್ಕಾರವು ಪ್ರತಿ ಮನೆಯ ಯಜಮಾನಿಗೆ 2000 ಉಚಿತವಾಗಿ ನೀಡುವ ಗೃಹ ಲಕ್ಷ್ಮೀ ಯೋಜನೆ ಇಂದು (ಜುಲೈ 19ಕ್ಕೆ) ಜಾರಿಗೆ ಬಂದಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಜನೆಗೆ‌‌ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ‌ ನೀಡಿದ್ದಾರೆ.ಈ ಹಿನ್ನಲೆಯಲ್ಲಿ ನಾಳೆಯಿಂದ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಪ್ರಕ್ರಿಯೆ ( Gruha Lakshmi Scheme Registration ) ಆರಂಭಗೊಳ್ಳಲಿದೆ.

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬದ ಯಜಮಾನಿಯ ಪಾತ್ರ ಪುಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂ.ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು 2023-24ನೇ ಸಾಲಿನಿಂದ ಜಾರಿಗೆ ತರಲಾಗಿದೆ.

ಯೋಜನೆಯ ಸೌಲಭ್ಯ ಪಡೆಯಲು ಪ್ರಮುಖ ಅರ್ಹತೆಗಳು

1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.

2. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗುವುದಿಲ್ಲ.

3. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುವವರಾಗಿದ್ದಲ್ಲಿ ಅರ್ಹರಾಗುವುದಿಲ್ಲ.

ಯೋಜನೆಯಡಿ ನೋಂದಾಯಿಸಲು ಬೇಕಾದ ದಾಖಲಾತಿಗಳು

1. ಪಡಿತರ ಚೀಟಿಯ ಸಂಖ್ಯೆ
2. ಯಜಮಾನಿಯ ಹಾಗೂ ಯಜಮಾನಿ ಪತಿಯ ಆಧಾರ್ ಕಾರ್ಡ್ ಸಂಖ್ಯೆ.
3. ಯಜಮಾನಿಯ ಆಧಾರ್‌ಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ಪಾಸ್ ಬುಕ್/ ಫಲಾನುಭವಿಯು ಇಚ್ಛಿಸುವ ಪರ್ಯಾಯ ಬ್ಯಾಂಕ್ ಖಾತೆಯ ವಿವರ.

ನೋಂದಣಿ ವಿಧಾನ

1. ಫಲಾನುಭವಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ ಉಚಿತವಾಗಿ ನೋಂದಾಯಿಸಿ ಕೊಳ್ಳಬಹುದು.

2. ಫಲಾನುಭವಿಗಳು ಮೇಲ್ಕಾಣಿಸಿದ ಕೇಂದ್ರಗಳಲ್ಲದೆ "ಪುಜಾ ಪ್ರತಿನಿಧಿ" (citizen Volunteers) ಮೂಲಕ ಸಹ ಸೇವಾಸಿಂಧು ಪೋರ್ಟಲ್‌ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.

3. ಪ್ರತಿ ಫಲಾನುಭವಿಯ ನೋಂದಾವಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಕ್ಕೆ ಕಾಲ್ ಮಾಡಿ ಅಥವಾ 8147500500 ನಂಬರ್‌ಗೆ SMS ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ.

4. ನಿಗಧಿತ ಸಮಯಕ್ಕೆ ಭೇಟಿ ನೀಡಿ ನೋಂದಾವಣೆ ಮಾಡಿಕೊಳ್ಳಲು ಸಾಧ್ಯವಾಗದೆಯಿದ್ದಲ್ಲಿ, ಅದೇ ಕೇಂದ್ರಕ್ಕೆ ಮುಂದಿನ ಯಾವುದೇ ದಿನಗಳಲ್ಲಿ ಕಛೇರಿ ಸಮಯದ ನಂತರ (ಸಂಜೆ 5.00 ಗಂಟೆ ನಂತರ) ತೆರಳಿ ನೋಂದಾಯಿಸಿಕೊಳ್ಳಬಹುದು.

5. ಅನುಮೋದಿಸಲ್ಪಟ್ಟ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ನೀಡಲಾಗುವುದು.

6. ಅರ್ಜಿ ನೋಂದಾಯಿಸಿಲು ಯಾವುದೇ ಶುಲ್ಕವನ್ನು ನೀಡಬೇಕಾಗಿಲ್ಲ.

7. ಯೋಜನೆಯಡಿ ಯೋಜನೆಯಡಿ ನೋಂದಾಯಿಸಿಕೊಳ್ಳಲು ಯಾವುದೇ ಅಂತಿಮ ದಿನಾಂಕ ಮತ್ತು ಸಮಯ ನಿಗದಿ ಪಡಿಸಿರುವುದಿಲ್ಲ.

ನೋಂದಣಿ ವಿಧಾನದ ಪ್ರಕ್ರಿಯೆ (FLOW Chart)

ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ 3 ಪುಕಾರ ಗಳಲ್ಲಿ ಇರುತ್ತದೆ.

ವಿಧಾನ-1 (Pre-Sanctioned RC's): ಈಗಾಗಲೇ ಕುಟುಂಬ ತಂತ್ರಾಂಶದಿಂದ ಅರ್ಹ ಫಲಾನುಭವಿಯ ಪಡಿತರ ಚೀಟಿಯ ಸಂಖ್ಯೆಯನ್ನಾಧರಿಸಿ ಯೋಜನೆಯಡಿ ಫಲಾನುಭವಿಗಳೆಂದು ಗುರುತಿಸಲಾಗಿದೆ. ಮುಂದುವರೆದು ಯೋಜನೆಯ Online ರಿಜಿಸ್ಟ್ರೇಷನ್‌ನ ಕೆಲವು ಫೀಲ್ಡ್‌ಗಳನ್ನು ಭರ್ತಿ ಮಾಡುವ ಅವಶ್ಯಕತೆ ಇದ್ದು, ಮೇಲ್ಕಾಣಿಸಿದ ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ಮಾಹಿತಿ ಒದಗಿಸುವುದು.

ವಿಧಾನ-2 (Process for Open Portal): ಫಲಾನುಭವಿಯ ಪಡಿತರ ಚೀಟಿಯ ಸಂಖ್ಯೆಯನ್ನು upload ಮಾಡಬೇಕಾಗುತ್ತದೆ. ಇದರ ಅನುಸಾರ ಕುಟುಂಬ ತಂತ್ರಾಂಶದಿಂದ ಫಲಾನುಭವಿಯ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಸದರಿ ಮಾಹಿತಿಯನ್ನು ಪರಿಶೀಲಿಸಿ ದಾಖಲೆಗಳು ತಾಳೆಯಾಗಿರುವುದು ಕಂಡುಬಂದಲ್ಲಿ ಯೋಜನೆಯಡಿ ನೋಂದಣಿ ಮಾಡಲಾಗುತ್ತದೆ.

ವಿಧಾನ-3 (Process for Citizen Enrollers): ಪುಜಾಪ್ರತಿನಿಧಿಗಳು ಮನೆಮನೆಗೆ ತೆರಳಿ ಇದುವರೆಗೂ ಯೋಜನೆಯಡಿ ನೋಂದಾಯಿಸದ ಫಲಾನುಭವಿಗಳ ನೋಂದಣಿ ಮಾಡಿಕೊಳ್ಳುತ್ತಾರೆ. ಯೋಜನೆಯಡಿ ನೋಂದಾಯಿಸಲು ಅವಶ್ಯವಿರುವ ದಾಖಲೆಗಳ ಮಾಹಿತಿ ನೀಡಿ ಪ್ರಜಾ ಪ್ರತಿನಿಧಿಗಳ ಮೂಲಕ ನೋಂದಾಯಿಸಿಕೊಳ್ಳಬಹುದು.

ಗೃಹಲಕ್ಷ್ಮಿ ಯೋಜನೆಯ ಸಹಾಯವಾಣಿ - 1902

ಗೃಹಲಕ್ಷ್ಮಿ ಯೋಜನೆ ಕುರಿತು ಯಾವುದೇ ಪ್ರಶ್ನೆಗಳು ಅಥವಾ ಸಮಸ್ಯೆಗಳಿಗೆ ಉಚಿತ Toll Free ಸಹಾಯವಾಣಿ ಸಂಖ್ಯೆ:1902 ಕ್ಕೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ಕರೆ ಮಾಡಬಹುದು.
logoblog

Thanks for reading Gruha Lakshmi Scheme Application Registration

Previous
« Prev Post

No comments:

Post a Comment

If You Have any Doubts, let me Comment Here