Title: Karnataka Government Gruha Lakshmi Scheme Guidlines 2023
ಕರ್ನಾಟಕ ಸರ್ಕಾರದ 5 ಉಚಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ' ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆ ಜುಲೈ 19 ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಕರ್ನಾಟಕ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ಯಾರು ಅರ್ಹರು..? ಹೇಗೆ ಅರ್ಜಿ ಸಲ್ಲಿಸಬೇಕು. ಇಲ್ಲಿದೆ ಸಂಪೂರ್ಣ ಮಾಹಿತಿ
1) ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಯೋಜನೆಯ ಫಲಾನುಭವಿಯಾಗಿರುತ್ತಾರೆ.
2) ಫಲಾನುಭವಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್ಟಿ ಪಾವತಿದಾರರಾಗಿರತಕ್ಕದ್ದಲ್ಲ.
3) ರೇಷನ್ ಕಾರ್ಡ್'ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಮತ್ತು ನೋಂದಣಿ ಸ್ಥಳದ ವಿವರ ಎಸ್‌ಎಂಎಸ್ ಮೂಲಕ ರವಾನೆ ಮಾಡಲಾಗುವುದು.
4) 'ಗೃಹಲಕ್ಷ್ಮೀ'ಯೋಜನೆಗೆ ನೋಂದಣಿಗೆ ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ, ಬ್ಯಾಂಕ್ ಖಾತೆಯ ಪಾಸ್ ಬುಕ್ ಬೇಕಾಗಿರುತ್ತದೆ. ಒಂದು ವೇಳೆ ಆಧಾರ್ ನಂಬರ್ ಜೋಡಣೆಯಾಗಿರುವ ಬೇರೆ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಆ ಖಾತೆಯ ಪಾಸ್ ಬುಕ್ ಅಗತ್ಯ. ಗ್ರಾಮ ವನ್, ಬಾಪೂಜಿ ಕೇಂದ್ರ, ಕರ್ನಾಟಕ ವನ್, ಬೆಂಗಳೂರು ವನ್ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಾಗ ಮಂಜೂರಾತಿ ಪತ್ರ ನೀಡಲಾಗುತ್ತದೆ. ಪ್ರಜಾಪ್ರತಿನಿಧಿ ಮೂಲಕ ನೊಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರ ಮನೆಗೆ ತಲುಪಿಸಲಾಗುತ್ತದೆ.
5) ಗೃಹಲಕ್ಷ್ಮೀ'ಯೋಜನೆಗೆ ನೋಂದಣಿಗೆ ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ, ಬ್ಯಾಂಕ್ ಖಾತೆಯ ಪಾಸ್ ಬುಕ್ ಅಗತ್ಯ. ಒಂದು ವೇಳೆ ಆಧಾರ್ ನಂಬರ್ ಜೋಡಣೆಯಾಗಿರುವ ಬೇರೆ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಆ ಖಾತೆಯ ಪಾಸ್ ಬುಕ್ ಅಗತ್ಯ. ಗ್ರಾಮ ವನ್, ಬಾಪೂಜಿ ಕೇಂದ್ರ, ಕರ್ನಾಟಕ ವನ್, ಬೆಂಗಳೂರು ವನ್ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಾಗ ಮಂಜೂರಾತಿ ಪತ್ರ ನೀಡಲಾಗುತ್ತದೆ.
6) ಪ್ರಜಾಪ್ರತಿನಿಧಿ ಮೂಲಕ ನೊಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರ ಮನೆಗೆ ತಲುಪಿಸಲಾಗುವುದು. ಅರ್ಜಿದಾರರು ನೀಡಿದ ಮೊಬೈಲ್ ಸಂಖ್ಯೆಗೆ ಎಸ್ ಎಂಎಸ್ ಮೂಲಕ ಮಂಜೂರಾತಿ ಸಂದೇಶ ರವಾನೆ ಮಾಡಲಾಗುತ್ತದೆ. ಫಲಾನುಭವಿಯ ಆಧಾರ್ ಜೋಡಣೆಯಾಗಿರುವ ಖಾತೆಗೆ ಡಿಬಿಟಿ ಮೂಲಕ ಹಣ ಜಮೆ ಮಾಡುತ್ತೇವೆ. ಬೇರೆ ಖಾತೆಗೆ ಆರ್ ಟಿಜಿಎಸ್ ಮೂಲಕ ಹಣ ಜಮೆ ಮಾಡಲಾಗುತ್ತದೆ. ನೋಂದಣಿಗೆ ಯಾವುದೇ ಶುಲ್ಕ, ಯಾವುದೇ ಅಂತಿಮ ದಿನಾಂಕ ಮತ್ತು ಸಮಯ ನಿಗದಿಪಡಿಸಿಲ್ಲ ಎಂದು ಹೇಳಿದರು.
No comments:
Post a Comment
If You Have any Doubts, let me Comment Here