JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Sunday, August 13, 2023

Candidates with B.Ed degree are not eligible for the post of Primary School Teacher- Supreme Court

  Jnyanabhandar       Sunday, August 13, 2023
Candidates with B.Ed degree are not eligible for the post of Primary School Teacher- Supreme Court

ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಬಿಇಡಿ ಪದವಿಯನ್ನು ಪಡೆದಿರುವವರು ಅರ್ಹರಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಲ್ಲದೇ ರಾಜಸ್ಥಾನ ಹೈಕೋರ್ಟ್ ಈ ಸಂಬಂಧ ನೀಡಿದ್ದಂತ ತೀರ್ಪನ್ನು ಎತ್ತಿ ಹಿಡಿದಿದೆ.

ಈ ಸಂಬಂಧ ಸಲ್ಲಿಕೆಯಾಗಿದ್ದಂತ ಅರ್ಜಿಯೊಂದರ ವಿಚಾರಣೆ ನಡೆಸಿದಂತಹ ಸುಪ್ರೀಂ ಕೋರ್ಟ್'ನ ನ್ಯಾಯಮೂರ್ತಿ ಅನಿರುದ್ಧ ಬೋಸ್ ಹಾಗೂ ನ್ಯಾಯಮೂರ್ತಿ ಸುಧಾಂಶು ದುಲಿಯಾ ಅವರನ್ನೊಳಗೊಂಡ ಪೀಠವು, ಭಾರತೀಯ ಸಂವಿಧಾನದ 21ಎ ಮತ್ತು ಶಿಕ್ಷಣ ಹಕ್ಕು ಕಾಯಿದೆ 2009ರ ಅಡಿಯಲ್ಲಿ ಭಾರತದಲ್ಲಿ ಪ್ರಾಥಮಿಕ ಶಿಕ್ಷಣ ಮೂಲಭೂತ ಹಕ್ಕನ್ನು ಖಾತರಿಪಡಿಸುತ್ತದೆ.

ಇದು 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕಡ್ಡಾಯ ಮತ್ತು ಗುಣಮಟ್ಟದ ಶಿಕ್ಷಣವನ್ನು ಒಳಗೊಂಡಿದೆ ಎಂದು ಅಭಿಪ್ರಾಯ ಪಟ್ಟಿದೆ.

ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಬಿಇಡಿ ಪದವಿ ಪಡೆದವರು ಪ್ರಾಥಮಿಕ ತರಗತಿಗಳಿಗೆ ಬೋಧನೆಗೆ ಅಗತ್ಯವಾದ ಮೂಲಭೂತ ಶಿಕ್ಷಣದ ಮಿತಿಯನ್ನು ಹೊಂದಿರುವುದಿಲ್ಲ. ಹೀಗಾಗಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಸಾಧ್ಯವಾಗುವುದಿಲ್ಲ ಎಂಬುದಾಗಿ ಅಭಿಪ್ರಾಯ ಪಟ್ಟಿದೆ.

ಈ ಹಿನ್ನಲೆಯಲ್ಲಿ ಬಿಇಡಿ ಪದವೀಧರರು 1 ರಿಂದ 5ನೇ ತರಗತಿಗೆ ಬೋಧನೆ ಮಾಡಲು ಅರ್ಹರಲ್ಲ ಎಂಬುದಾಗಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.


logoblog

Thanks for reading Candidates with B.Ed degree are not eligible for the post of Primary School Teacher- Supreme Court

Previous
« Prev Post

No comments:

Post a Comment

If You Have any Doubts, let me Comment Here