ರಾಜ್ಯ ಸರ್ಕಾರವೂ ಈಗಾಗಲೇ ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನೆ ಇತ್ಯಾದಿಗಳನ್ನು ರೂಪಿಸಲು ಸುಧಾಕರ್ ರಾವ್ ಅಧ್ಯಕ್ಷತೆಯ 7ನೇ ರಾಜ್ಯ ವೇತನ ಆಯೋಗವನ್ನು ರಚನೆ ಮಾಡಿದೆ.
ಶುಕ್ರವಾರ 7ನೇ ರಾಜ್ಯ ವೇತನ ಆಯೋಗದ ಅಧ್ಯಕ್ಷ ಸುಧಾಕರ್ ರಾವ್ ಹಾಗೂ ಸದಸ್ಯರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಿತು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್ ಹಾಗೂ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದ್ದಾಗ, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಿ 6 ತಿಂಗಳ ಕಾಲಮಿತಿಯಲ್ಲಿ ವರದಿಯನ್ನು ಸಲ್ಲಿಸಲು, ತ್ರಿಸದಸ್ಯರ 7ನೇ ರಾಜ್ಯ ವೇತನ ಆಯೋಗ ರಚನೆ ಮಾಡಲಾಗಿತ್ತು.
ಸರ್ಕಾರ ದಿನಾಂಕ 19/11/2022ರಂದು ಈ ಕುರಿತು ಆದೇಶ ಹೊರಡಿಸಿತ್ತು. 7ನೇ ರಾಜ್ಯ ವೇತನ ಆಯೋಗಕ್ಕೆ ಸುಧಾಕರ್ ರಾವ್ ಅಧ್ಯಕ್ಷರು. ಪಿ. ಬಿ. ರಾಮಮೂರ್ತಿ, ಶ್ರೀಕಾಂತ್ ಬಿ. ವನಹಳ್ಳಿ, ಹೆಪ್ಸಿಬಾ ರಾಣಿ ಕೊರ್ಲಪಾಟಿ ಕಾರ್ಯದರ್ಶಿಗಳಾಗಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಮುಗಿದು ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಆಯೋಗ ವರದಿ ನೀಡಲು ನಿಗದಿಪಡಿಸಿರುವ ಕಾಲಾವಧಿಯನ್ನು ದಿನಾಂಕ 19/5/2023ರಿಂದ 6 ತಿಂಗಳು ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.
7ನೇ ವೇತನ ಆಯೋಗದ ಪರಿಶೀಲನಾರ್ಹ ಅಂಶಗಳು ಕರ್ನಾಟಕ ಸರ್ಕಾರ ಆಯೋಗದ ಪರಿಶೀಲನಾರ್ಹ ಅಂಶಗಳ ಕುರಿತು ಸಹ ಈಗಾಗಲೇ ಆದೇಶ ಹೊಡಿಸಿದೆ. ರಾಜ್ಯ ಸರ್ಕಾರಿ ನೌಕರರ (ಯುಜಿಸಿ/ ಎಐಸಿಟಿಇ/ ಐಸಿಎಆರ್/ ಎನ್‌ಜೆಪಿಸಿ ವೇತನ ಶ್ರೇಣಿ ಹೊಂದಿರುವವರನ್ನು ಹೊರತುಪಡಿಸಿ), ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳ ಬೋಧಕೇತರ ಸಿಬ್ಬಂದಿಗಳಿಗೆ ಮರಣ ಹಾಗೂ ನಿವೃತ್ತಿ ಉಪದಾನ ಸೌಲಭ್ಯಗಳನ್ನೊಳಗೊಂಡಂತೆ ಲಭ್ಯವಿರುವ ಎಲ್ಲಾ ಕ್ರೋಢೀಕೃತ ಸೌಲಭ್ಯಗಳನ್ನು ಗಣನೆಗೆ ತೆಗೆದುಕೊಂಡು, ಈ ಸಿಬ್ಬಂದಿಗಳ ಪ್ರಸ್ತುತ ವೇತನ ರಚನೆಯನ್ನು ಪರಿಶೀಲಿಸುವುದು ಹಾಗೂ ಅಪೇಕ್ಷಣೀಯವಾದ ಹಾಗೂ ಕಾರ್ಯಸಾಧ್ಯವಿರುವ ನೂತನ ವೇತನ ರಚನೆಯನ್ನು ರೂಪಿಸಬೇಕು ಎಂದು ಹೇಳಿದೆ.
No comments:
Post a Comment
If You Have any Doubts, let me Comment Here