JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Sunday, September 24, 2023

Circular Related to conducting Assessment 2 for Class 9 students and Annual exam for Class 11 students by KSEAB from the year 2023-24

  Jnyanabhandar       Sunday, September 24, 2023
G.O. Related to conducting Assessment 2 for Class 9 students and Annual exam for Class 11 students by KSEAB from the year 2023-24

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2023_24ನೇ_ಸಾಲಿನಿಂದ ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ ಅನುದಾನಿತ ಅನುದಾನ ರಹಿತ ಶಾಲೆಗಳಲ್ಲಿ 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ 2 ಪರೀಕ್ಷೆಯನ್ನು ಹಾಗೂ 11ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸುವ ಬಗ್ಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬೆಂಗಳೂರು, ಈಗಾಗಲೇ 10 ಮತ್ತು 12ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆಗಳನ್ನು ಹಾಗೂ 5 ಮತ್ತು 8ನೇ ತರಗತಿಗಳಿಗೆ ಮೌಲ್ಯಾಂಕನವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ನಡೆಸಲಾಗುತ್ತಿದ್ದು, 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮತ್ತು 11ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ಮಂಡಳಿಯಿಂದಲೇ ನಡೆಸಿದ್ದಲ್ಲಿ ಎಲ್ಲಾ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಪರಿಶೀಲಿಸುವ ಮೂಲಕ ವಿದ್ಯಾರ್ಥಿಗಳ ಕಲಿಕಾ ಪ್ರಗತಿಯನ್ನು ಬಲವರ್ಧನೆಗೊಳಿಸಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

1966 ರ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಾಯಿದೆ ಮತ್ತು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ, ತಿದ್ದುಪಡಿ ಅಧಿನಿಯಮ 2022 ರ ನಿಯಮ 15 (A) (IV) ರಲ್ಲಿ Any other Examination which the State Government may from time to time by motification specify: ಎಂದಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಗಳ ಜೊತೆಗೆ ಇತರ ಪರೀಕ್ಷೆಗಳನ್ನು ನಡೆಸಲು ಸರ್ಕಾರಿ ಆದೇಶವನ್ನು ಹೊರಡಿಸಬೇಕಿರುತ್ತದೆ. ಈ ಸಂಬಂಧ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮತ್ತು 11ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ ನಡೆಸುವ ಕುರಿತು ಪರಿಶೀಲಿಸಿ. ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿದೆ.
logoblog

Thanks for reading Circular Related to conducting Assessment 2 for Class 9 students and Annual exam for Class 11 students by KSEAB from the year 2023-24

Previous
« Prev Post

No comments:

Post a Comment

If You Have any Doubts, let me Comment Here