JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Friday, September 29, 2023

ICC ODI World Cup Teams 2023

  Jnyanabhandar       Friday, September 29, 2023

ICC ODI World Cup Teams 2023

ವಿಶ್ವದ ರಾಷ್ಟ್ರಗಳು ತಮ್ಮ ತಮ್ಮ ವಿಶ್ವಕಪ್ ತಂಡಗಳನ್ನು ಅಂತಿಮಗೊಳಿಸಲು ಹಾಗೂ ತಂಡದಲ್ಲಿ ಯಾವುದಾದರೂ ಬದಲಾವಣೆ ಮಾಡಲು ಐಸಿಸಿ ನೀಡಿದ್ದ ಗಡುವು ಮುಗಿದಿದೆ. ಹೀಗಾಗಿ ವಿಶ್ವಕಪ್ ಆಡುವ ಎಲ್ಲಾ 10 ದೇಶಗಳ ಮಂಡಳಿಗಳೂ ತಮ್ಮ ಅಂತಿಮ 15 ಸದಸ್ಯರ ತಂಡವನ್ನು ಪ್ರಕಟಿಸಿವೆ.

ತಮ್ಮ ತಮ್ಮ ವಿಶ್ವಕಪ್ (ODI World Cup 2023) ತಂಡಗಳನ್ನು ಅಂತಿಮಗೊಳಿಸಲು ಹಾಗೂ ತಂಡದಲ್ಲಿ ಯಾವುದಾದರೂ ಬದಲಾವಣೆ ಮಾಡಲು ಐಸಿಸಿ (ICC) ನೀಡಿದ್ದ ಗಡುವು ಇಂದಿಗೆ ಮುಗಿದಿದೆ. ಹೀಗಾಗಿ ವಿಶ್ವಕಪ್ ಆಡುವ ಎಲ್ಲಾ 10 ದೇಶಗಳ ಮಂಡಳಿಗಳೂ ತಮ್ಮ ಅಂತಿಮ 15 ಸದಸ್ಯರ ತಂಡವನ್ನು ಇಂದು ಪ್ರಕಟಿಸಿವೆ. ಇದರಲ್ಲಿ ಕೆಲವು ತಂಡಗಳು ಈ ಹಿಂದೆ ಪ್ರಕಟಿಸಿದ್ದ ತಂಡವನ್ನೇ ಉಳಿಸಿಕೊಂಡಿದ್ದರೆ, ಇನ್ನೂ ಕೆಲವು ತಂಡಗಳು ತಮ್ಮ ತಮ್ಮ ತಂಡಗಳಲ್ಲಿ ಕೆಲವು ಪ್ರಮುಖ ಬದಲಾವಣೆ ಮಾಡಿವೆ. ಇದಕ್ಕೆ ಭಾರತ ಕೂಡ ಹೊರತಾಗಿಲ್ಲ. ಈ ಹಿಂದೆ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದ ಆಲ್‌ರೌಂಡರ್ ಅಕ್ಷರ್ ಪಟೇಲ್ (Akshar Patel) ಟೀಂ ಇಂಡಿಯಾದಿಂದ ಹೊರಬಿದ್ದಿದ್ದರೆ, ಅವರ ಜಾಗದಲ್ಲಿ ಆರ್. ಅಶ್ವಿನ್ (R Ashwin) ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನುಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಯಾವ ತಂಡದಲ್ಲಿ ಎಷ್ಟು ಇಂಜುರಿ?


ಇನ್ನು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಆಸ್ಟ್ರೇಲಿಯಾದ ಅನುಭವಿ ಸ್ಪಿನ್ನರ್ ಆಶ್ಟನ್ ಅಗರ್ ವಿಶ್ವಕಪ್ ತಂಡದಿಂದ ಹೊರಬಿದ್ದಿದ್ದು, ಅವರ ಜಾಗದಲ್ಲಿ ಬ್ಯಾಟರ್ ಮಾರ್ನಸ್ ಲಬುಶೇನ್ ಅವರು ಆಯ್ಕೆಯಾಗಿದ್ದಾರೆ. ಹಾಗೆಯೇ ದಸುನ್ ಶನಕ ನೇತೃತ್ವದ ಶ್ರೀಲಂಕಾ ತಂಡವು ತಮ್ಮ ಸ್ಟಾರ್ ಸ್ಪಿನ್ನರ್ ವನಿಂದು ಹಸರಂಗಾ ಇಲ್ಲದೆ ಕಣಕ್ಕಿಳಿಯುತ್ತಿದ್ದರೆ, ಮತ್ತೊಂದೆಡೆ, ಕಳಪೆ ಫಿಟ್‌ನೆಸ್‌ನಿಂದಾಗಿ ಬಾಂಗ್ಲಾದೇಶದ ಅನುಭವಿ ಆರಂಭಿಕ ಆಟಗಾರ ತಮೀಮ್ ಇಕ್ಬಾಲ್ ಅವರನ್ನು ತಂಡದಿಂದ ಕೈಬಿಡಲಾಯಿತು.

ಪಾಕಿಸ್ತಾನ ತಂಡ ಕೂಡ ಪ್ರಮುಖ ಬೌಲರ್ ಇಲ್ಲದೆ ಕಣಕ್ಕಿಳಿಯುತ್ತಿದ್ದು, ಸ್ಟಾರ್ ಸ್ಪೀಡ್‌ಸ್ಟರ್ ನಸೀಮ್ ಷಾ ಭುಜದ ಗಾಯದ ಕಾರಣ ಈ ಈವೆಂಟ್‌ನಿಂದ ಹೊರಗುಳಿಯಲ್ಲಿದ್ದಾರೆ. ಇಂಗ್ಲೆಂಡ್ ತಂಡ ಕೂಡ ಇಂಜುರಿಯಿಂದ ಹಾನಿಗೊಳಗಾಗಿದ್ದು, ತಂಡದ ಸ್ಫೋಟಕ ಬ್ಯಾಟರ್ ಜೇಸನ್ ರಾಯ್ ಅವರನ್ನು ತಂಡದಿಂದ ಹೊರಗಿಟ್ಟು, ಹ್ಯಾರಿ ಬ್ರೂಕ್ ಅವರನ್ನು ಅಂತಿಮ ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಿದೆ. ಹಾಗೆಯೇ ದಕ್ಷಿಣ ಆಫ್ರಿಕಾ ತಂಡದಲ್ಲೂ ಇಂಜುರಿ ಸಮಸ್ಯೆ ತಲೆದೂರಿದ್ದು, ವೇಗಿಗಳಾದ ಅನಿರಿಚ್ ನೊಕಿಯಾ ಮತ್ತು ಸಿಸಂದಾ ಮಗಾಲಾ ಗಾಯದ ಕಾರಣದಿಂದ ತಂಡದಿಂದ ಹೊರಗುಳಿದಿದ್ದಾರೆ.ವಿಶ್ವಕಪ್'ನ ಎಲ್ಲಾ 10 ಅಂತಿಮ ತಂಡಗಳು


ಭಾರತ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.

ಆಸ್ಟ್ರೇಲಿಯಾ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಾರ್ನಸ್ ಲಬುಶೇನ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್.

ಪಾಕಿಸ್ತಾನ: ಬಾಬರ್ ಆಝಂ (ನಾಯಕ), ಶಾದಾಬ್ ಖಾನ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಅಘಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಅಫ್ರಿದಿ , ಮೊಹಮ್ಮದ್ ವಾಸಿಂ.

ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋ, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲನ್, ಆದಿಲ್ ರಶೀದ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್, ಕ್ರಿಸ್ ವೋಕ್ಸ್.

ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್ .

ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಆಂಡಿಲ್ ಫೆಹ್ಲುಕ್ವಾಯೊ, ಕಗಿಸೊ ರಬಾಡ, ಡ್ಯುಬ್ರೇಸ್ ಶಮ್ವಾನ್ , ಲಿಜಾಡ್ ವಿಲಿಯಮ್ಸ್.

ಅಫ್ಘಾನಿಸ್ತಾನ: ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್, ರಿಯಾಜ್ ಹಸನ್, ರಹಮತ್ ಷಾ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮರ್ಜೈ, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನೂರ್ ಅಹಮದ್, ನೂರ್ ಅಹ್ಮದ್, ನೂರ್ ಅಹ್ಮದ್ ಹಕ್

ಶ್ರೀಲಂಕಾ: ದಸುನ್ ಶನಕ (ನಾಯಕ), ಕುಸಲ್ ಮೆಂಡಿಸ್ (ಉಪನಾಯಕ), ಕುಸಲ್ ಪೆರೇರಾ, ಪಾತುಮ್ ನಿಸ್ಸಾಂಕ, ಲಹಿರು ಕುಮಾರ, ದಿಮುತ್ ಕರುಣರತ್ನೆ, ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ಮಹೇಶ್ ತೀಕ್ಷಣ, ದುನಿತ್ ವೆಲ್ಲಲಾಗೆ, ಕಸುನ್ ರಜಿತ, ಮತೀಶ ಪಥಿರಾಣ, ಮಧುಶಂಕ, ದುಶನ್ ಹೇಮಂತ

ಮೀಸಲು ಆಟಗಾರ: ಚಾಮಿಕಾ ಕರುಣಾರತ್ನೆ


ಬಾಂಗ್ಲಾದೇಶ: ಶಕೀಬ್ ಅಲ್ ಹಸನ್ (ನಾಯಕ), ಲಿಟ್ಟನ್ ದಾಸ್, ತಂಝಿದ್ ಹಸನ್ ತಮೀಮ್, ನಜ್ಮುಲ್ ಹೊಸೈನ್ ಶಾಂಟೊ (ವಿಸಿ), ತೌಹಿದ್ ಹೃದಯೋಯ್, ಮುಶ್ಫಿಕರ್ ರಹೀಮ್, ಮಹ್ಮುದುಲ್ಲಾ ರಿಯಾದ್, ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್, ಶಾಕ್ ಮಹೆದಿ ಹಸನ್, ತಸ್ಕಿನ್ ಅಝುರ್, ತಸ್ಕಿನ್ ಹಸನ್ ಮಹಮೂದ್, ಶೋರಿಫುಲ್ ಇಸ್ಲಾಂ, ತಂಝಿಮ್ ಹಸನ್ ಸಾಕಿಬ್.

ನೆದರ್ಲೆಂಡ್: ಸ್ಕಾಟ್ ಎಡ್ವರ್ಡ್ಸ್ (ನಾಯಕ), ಮ್ಯಾಕ್ಸ್ ಒ’ಡೌಡ್, ಬಾಸ್ ಡಿ ಲೀಡ್, ವಿಕ್ರಮ್ ಸಿಂಗ್, ತೇಜಾ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ಕಾಲಿನ್ ಅಕರ್ಮನ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ರಯಾನ್ ಕ್ಲೈನ್, ವೆಸ್ಲಿ ಬ್ಯಾರೆಸಿ, ಸಾಕಿಬ್ ಜುಲ್ಫಿಕ್ , ಶರೀಜ್ ಅಹ್ಮದ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್.

logoblog

Thanks for reading ICC ODI World Cup Teams 2023

Previous
« Prev Post

No comments:

Post a Comment

If You Have any Doubts, let me Comment Here