Heading: Karnataka State Level Best Teachers Award Winner Teachers List for the Year 2023-24
2023-24 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಶನಿವಾರ ಪ್ರಕಟಗೊಂಡಿದೆ.
ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಮಹಾಂತಯ್ಯ ಎಸ್ ಹೊಸಮಠ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು (ಓರ್ವ ವಿಶೇಷ ಶಿಕ್ಷಕರೂ ಒಳಗೊಂಡಂತೆ) 2023-24 ನೇ ಸಾಲಿಗೆ ಈ ಕೆಳಕಂಡಂತೆ ಆಯ್ಕೆ ಮಾಡಲಾಗಿದೆ.
ಮುಂದುವರಿದು, ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಈ ಪುರಸ್ಕೃತರ ಪಟ್ಟಿಯಲ್ಲಿನ ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ "ಸಾವಿತ್ರಿಬಾಯಿ ಫುಲೆ ಇವರ ಹೆಸರಿನಲ್ಲಿ ದಿನಾಂಕ: 15.09.2023 ರಂದು ನಡೆಯುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲು ಅನುಮತಿ ನೀಡಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರು/ಸಹ ಶಿಕ್ಷಕರು/ವಿಶೇಷ ಶಿಕ್ಷಕರು/ಮುಖ್ಯ ಶಿಕ್ಷಕರುಗಳಿಗೆ ಸರ್ಕಾರದ ಆದೇಶ ಸಂಖ್ಯೆ: ಇಪಿ 308 ಪಿಬಿಎಸ್ 2021, ದಿನಾಂಕ: 12.09.2022 ರ ಅನುಸಾರ ತಲಾ ರೂ. 25,000/- ರಂತೆ, ಒಟ್ಟು ರೂ. 7,75,000/- ಗಳ ನಗದು ಪುರಸ್ಕಾರ ನೀಡಲು ಹಾಗೂ ಸದರಿ ವೆಚ್ಚವನ್ನು ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಬೆಂಗಳೂರು ಇಲ್ಲಿಂದ ಭರಿಸಲು ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ.
No comments:
Post a Comment
If You Have any Doubts, let me Comment Here