K-SET NOTIFICATION 2023
ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಕರ್ನಾಟಕ ಸರ್ಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(KSET)-2023 ಅನ್ನು ನವೆಂಬರ್.26, 2023ರ ಭಾನುವಾರದಂದು ನಡೆಸಲಾಗುತ್ತಿದೆ.
ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
K-SET ಪರೀಕ್ಷೆಗೆ ಅರ್ಜಿ ಸಲ್ಲಿಸುವ ವಿಧಾನ
ಅರ್ಹ ಅಭ್ಯರ್ಥಿಗಳು kea.kar.nic.in ಜಾಲತಾಣಕ್ಕೆ ಭೇಟಿ ನೀಡಿ, ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಲ್ಲದೇ ಕೇವಲ ಗಣಕೀಕೃತ ಅಂಚೆ ಕಚೇರಿಯ ಶಾಖೆಗಳಲ್ಲಿ ಮಾತ್ರ ಅರ್ಜಿ ಶುಲ್ಕ ಪಾವತಿಸುವಂತೆ ತಿಳಿಸಿದೆ.
K-SET-2023ರ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 11-09-2023ರಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-09-2023 ಆಗಿದೆ. ಇ-ಪೋಸ್ಟ್ ಆಫೀಸ್ ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 03-10-2023 ಆಗಿರುತ್ತದೆ.
K-SET ಪರೀಕ್ಷೆಯ ಅರ್ಜಿ ಶುಲ್ಕ
ಕಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಎ, 3ಬಿ ಯವರಿಗೆ ರೂ.1,000. ಪ್ರವರ್ಗ-1, ಎಸ್ಸಿ, ಎಸ್ಟಿ, ಪಿಡಬ್ಲೂಡಿ, ಲಿಂಗ ಅಲ್ಪಸಂಖ್ಯಾತರಿಗೆ ರೂ.700 ಆಗಿದೆ.
K-SET-2023 ಪರೀಕ್ಷೆ ತೆಗೆದುಕೊಳ್ಳಲು ಯಾವುದೇ ಗರಿಷ್ಠ ವಯೋಮಿತಿ ಇರುವದಿಲ್ಲ. ಈ ಸಂಬಂಧದ ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ಕೆಇಎ ವೆಬ್ಸೈಟ್'ಗೆ ಭೇಟಿ ನೀಡಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ
No comments:
Post a Comment
If You Have any Doubts, let me Comment Here