JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Saturday, September 23, 2023

Regarding extending the working hours of the offices of the Registration and Stamp Department in the interest of the public

  Jnyanabhandar       Saturday, September 23, 2023

Regarding extending the working hours of the offices of the Registration and Stamp Department in the interest of the public

ಸಾರ್ವಜನಿಕರ ಹಿತದೃಷ್ಟಿಯಿಂದ ಇಂದಿನಿಂದ ಸೆ.30ರವರೆಗೆ ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳ ಕೆಲಸದ ಅವಧಿಯನ್ನು ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ವಿಸ್ತರಣೆ ಮಾಡಿ ಶುಕ್ರವಾರ ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತೆ ಬಿ.ಆರ್​.ಮಮತಾ ಅವರಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.

2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ನೋಂದಣಿ ಮಾಡಿಸುವವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ನಾಳೆಯಿಂದ ಸೆ.30ರವರೆಗೆ ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿ (Sub-registrar office) ಅವಧಿಯನ್ನು ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ವಿಸ್ತರಣೆ ಮಾಡಿ ಶುಕ್ರವಾರ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.

ಈ ಕುರಿತಾಗಿ ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತೆ ಬಿಆರ್ ಮಮತಾ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಕಚೇರಿ ಕಾರ್ಯನಿರ್ವಹಣಾ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದೆ. ಸೆಪ್ಟೆಂಬರ್ 23 ನಾಲ್ಕನೇ ಶನಿವಾರದಂದೂ ಕೂಡ ಈ ಕಾರ್ಯ ನಿರ್ವಹಣೆ ಇರಲಿದ್ದು, ಹೆಚ್ಚುವರಿ ಕೆಲಸದ ಅವಧಿ ಸೆ. 30 ರವರೆಗೆ ಮಾತ್ರ ಅನ್ವಯ ಆಗಲಿದೆ.

ಆ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷಿಯಿಂದ ರಾಜ್ಯದ ಎಲ್ಲಾ ಉಪ ನೋಂದಣಿ ಕಛೇರಿಗಳ ಕೆಲಸದ ಅವಧಿಯನ್ನು ಸೆ. 23 ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8.00 ಗಂಟೆಯಿಂದ ರಾತ್ರಿ 8.00 ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಛೇರಿ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ಸೆ. 23 ರಂದು ನಾಲ್ಕನೇ ಶನಿವಾರವಾದರೂ ಕೂಡ ಈ ಅವಧಿಯಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ. ಈ ಕೆಲಸದ ಅವಧಿ ಸೆ. 30ರ ವರೆಗೆ ಮಾತ್ರ ಜಾರಿಯಲ್ಲಿರುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದು ಕೊಳ್ಳುವಂತೆ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಮನವಿ ಮಾಡಿದೆ.



logoblog

Thanks for reading Regarding extending the working hours of the offices of the Registration and Stamp Department in the interest of the public

Previous
« Prev Post

No comments:

Post a Comment

If You Have any Doubts, let me Comment Here