SSLC, PUC ವಿದ್ಯಾರ್ಥಿಗಳಿಗೆ ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ವಿಧಾನಸೌಧದಲ್ಲಿಇಂದು ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಘೋಷಣೆ ಮಾಡಿದರು. ಈ ನಿಯಮದ ಪ್ರಕಾರ ವಿದ್ಯಾರ್ಥಿಗಳು, ಕೆಲ ವಿಷಯಗಳಲ್ಲಿ ಫೇಲ್ ಆದರೂ ಮುಂದಿನ ತರಗತಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ.
ಶಿಕ್ಷಣ ಇಲಾಖೆ ಇದುವರೆಗೆ ಎರಡು ಪರೀಕ್ಷೆಗಳನ್ನು ನಡೆಸುತಿತ್ತು. ಶೈಕ್ಷಣಿಕ ಪ್ರಗತಿ, ಅರ್ಥಪೂರ್ಣ ಕಲಿಕೆ, ಜ್ಞಾನ ಹೆಚ್ಚಿಸುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಪರೀಕ್ಷೆಗಳ ವೇಳಾಪಟ್ಟಿಯನ್ನೂ ಇಲಾಖೆ ಬಿಡುಗಡೆ ಮಾಡಿದೆ. ಹೊಸ ನಿಯಮದ ಪ್ರಕಾರ ವಿದ್ಯಾರ್ಥಿಗಳು ಕೆಲವು ವಿಷಯಗಳಲ್ಲಿ ಅನುತ್ತೀರ್ಣರಾದರೂ ಮುಂದಿನ ತರಗತಿಗಳಿಗೆ ಹೋಗಲು ಅವಕಾಶ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.
ವಿದ್ಯಾರ್ಥಿಗಳು ಕೆಲವು ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದರೂ ಸಹ ಅಗತ್ಯವಿರುವ ಕನಿಷ್ಠ ಅಂಕಗಳನ್ನು ಒಟ್ಟು ಎಂದು ಪರಿಗಣಿಸಲಾಗುತ್ತದೆ. ಕಲಿಕೆಯ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.
No comments:
Post a Comment
If You Have any Doubts, let me Comment Here