Civil Police Constable Exam Date 2023
ರಾಜ್ಯ ಪೊಲೀಸ್ ಇಲಾಖೆಯ ಕಲ್ಯಾಣ ಕರ್ನಾಟಕ ವಿಭಾಗದಲ್ಲಿ ಖಾಲಿ ಇರುವ 454 ಸಿವಿಲ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯನ್ನು ನ.5ಕ್ಕೆ ನಿಗದಿಗೊಳಿಸಿ ಪೊಲೀಸ್ ಇಲಾಖೆ ಆದೇಶಿಸಿದೆ.
ಕಲ್ಯಾಣ ಕರ್ನಾಟಕ ಪ್ರದೇಶದ ಕಾನ್‌ಸ್ಟೆಬಲ್(ಸಿವಿಲ್) ಮತ್ತು ಸೇವಾನಿರತ ಹಾಗೂ ಬ್ಯಾಕ್‌ಲಾಗ್ ಹುದ್ದೆಗಳಿಗೆ ಅಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 12.30ರ ವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ.
ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತದೆ.
ಕರೆಪತ್ರದ ಬಗ್ಗೆ ಅರ್ಹ ಅಭ್ಯರ್ಥಿಗಳ ಮೊಬೈಲ್‌ಗೆ ಎಸ್‌ಎಂಎಸ್ ಮೂಲಕ ಮಾಹಿತಿ ನೀಡುವ ಜತೆಗೆ ಲಿಂಕ್ ಸಹ ಕಳುಹಿಸಲಾಗುತ್ತದೆ. ಅಭ್ಯರ್ಥಿಗಳು ಕರೆಪತ್ರ ಡೌನ್‌ಲೋಡ್ ಮಾಡಿಕೊಂಡು ನಿಗದಿತ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಡಿಐಜಿಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಸೂಚಿಸಿದ್ದಾರೆ.
No comments:
Post a Comment
If You Have any Doubts, let me Comment Here