JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Thursday, October 12, 2023

GPSTR Recruitment 2022 Court Order Updates

  Jnyanabhandar       Thursday, October 12, 2023
GPSTR Recruitment Court Order Updates

GPSTR stands for Graduate Primary School Teacher Recruitment, and it is a recruitment process conducted by the Karnataka government to hire talented and capable teachers for primary schools across the state. This is a great opportunity for aspiring teachers to kick-start their careers and contribute to the education system.

ಆರೋಗ್ಯ ಯೋಜನೆಗೆ ಸಂಬಂಧಿಸಿದಂತೆ ನಮ್ಮ ಈ ಕೆಳಗಿನ ಆದಿತ್ಯ ಬಿರ್ಲಾ ಹೆಲ್ತ್ Insurance Website ಗೆ ಬೇಟಿ ನೀಡಿ.

Click Here To View Our Aditya Birla Health Insurance Website 


To be eligible for Karnataka GPSTR teacher recruitment, candidates must have a minimum educational qualification of a Bachelor's degree in Education (B.Ed.) or a Diploma in Elementary Education (D.El.Ed.) from a recognized university or institute. It is important to have the relevant teaching credentials to ensure the applicants are well-equipped to handle the responsibilities of a primary school teacher.


15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ 2022 ರ ಮಾರ್ಚ್‌ /ಏಪ್ರಿಲ್‌ ತಿಂಗಳಲ್ಲಿ ಅರ್ಜಿ ಸ್ವೀಕಾರ ಮಾಡಲಾಗಿತ್ತು. ಮೇ 21, 22 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತ್ತು.

15,000 ಶಾಲಾ ಶಿಕ್ಷಕರ ನೇಮಕಾತಿಗೆ ದಿನಾಂಕ 21-03-2022ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಆನ್ ಲೈನ್ ಮೂಲಕ 1,16,223 ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ನೇಮಕಾತಿಗೆ ದಿನಾಂಕ 21-05-2022 ಮತ್ತು 22-05-2022ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಗೆ ಹಾಜರಾದಂತ 68,849 ಮಂದಿಯಲ್ಲಿ ಅರ್ಹತೆಯನ್ನು 51,098 ಮಂದಿ ಪಡೆದಿದ್ದರು. 1:2 ದಾಖಲೆಗಳ ಪರಿಶೀಲನೆ ನಡೆಸಿದಾಗ 22,432 ಮಂದಿ ಅರ್ಹತೆ ಪಡೆದಿದ್ದರು. ಇವರಲ್ಲಿ 1:1 13,351 ಮಂದಿ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಅರ್ಹತೆ ಪಡೆದಿದ್ದರು.

ಫೆ. 27ರಂದು ಪ್ರಕಟವಾಗಿದ್ದ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 13,351 ಮಂದಿ ಆಯ್ಕೆಯಾಗಿದ್ದು, ಈಗ ಪ್ರಕಟವಾದ ಮುಖ್ಯ ಆಯ್ಕೆ ಪಟ್ಟಿಯಲ್ಲಿ ನೇಮಕಾತಿಯಲ್ಲಿ ಒಬ್ಬರ ಸಂಖ್ಯೆ ಹೆಚ್ಚಳವಾಗಿದೆ. ಮೂಲವೃಂದದಲ್ಲಿ 9,159 ಮಂದಿ, ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದಲ್ಲಿ 4,193 ಮಂದಿ ನೇಮಕಗೊಂಡಿದ್ದಾರೆ. ಒಟ್ಟು 21 ಎಂಜಿನಿಯರಿಂಗ್‌ ಅಭ್ಯರ್ಥಿಗಳು, ಮೂವರು ತೃತೀಯ ಲಿಂಗಿಗಳು ಆಯ್ಕೆ ಆಗಿದ್ದಾರೆ.


ಆಯ್ಕೆ ಪಟ್ಟಿ ವಿರುದ್ಧ ಕೋರ್ಟ್ ಮೊರೆ ಹೋದ ಅಭ್ಯರ್ಥಿಗಳಿಗೆ ಇಂದು ಕೋರ್ಟ್ ತನ್ನ ಆದೇಶವನ್ನು ಹೊರಡಿಸಿದೆ. ಆದೇಶದ ವಿವರಣೆ ಈ ಕೆಳಗಿನಂತೆ ಇರುತ್ತದೆ.

15000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಆಯ್ಕೆ ಪಟ್ಟಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಏಕ ಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್ ವಿಭಾಗಿಯ ಪೀಠ ರದ್ದು ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ, ನ್ಯಾಯಮೂರ್ತಿ ಎಜಿಎಸ್ ಕಮಲ್ ಅವರಿದ್ದ ವಿಭಾಗಿಯ ಪೀಠ ಶಿಕ್ಷಕರ ನೇಮಕಾತಿಗೆ ಆದೇಶ ನೀಡಿದೆ.

ಮಾರ್ಚ್ 8, 2023 ಆಯ್ಕೆ ಪಟ್ಟಿಯಂತೆ ನೇಮಕಾತಿ ಅಂತಿಮಗೊಳಿಸಲು ಸೂಚನೆ ನೀಡಲಾಗಿದೆ. ಸರ್ಕಾರದ ಅಧಿಸೂಚನೆಯಂತೆ ಆದಾಯ ಪ್ರಮಾಣ ಪತ್ರ ಸಲ್ಲಿಸಿದವರ ಆಯ್ಕೆ ಅಂತಿಮವಾಗಿದೆ. ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸದ ಅಭ್ಯರ್ಥಿಗಳ ಆಯ್ಕೆ ಮುಂದೂಡಲಾಗಿದೆ. ನೊಂದ ಅಭ್ಯರ್ಥಿಗಳು ಕೆಎಟಿಯಲ್ಲಿ ದಾವೆ ಹೂಡಬಹುದಾಗಿದೆ. ದಾವೆ ಇತ್ಯರ್ಥವಾಗುವವರೆಗೆ ವಿವಾದಿತ ಅಭ್ಯರ್ಥಿಗಳ ಆಯ್ಕೆ ಮುಂದೂಡಿಕೆ ಆಗಿರುತ್ತದೆ.

ಜೂನ್ 8, 2023 ಆಯ್ಕೆ ಪಟ್ಟಿಯಲ್ಲಿ 450 ಅಭ್ಯರ್ಥಿಗಳ ಬದಲಾವಣೆ ಆಗಿದೆ. ಹೊಸ ನೀತಿಯಲ್ಲಿ 450 ಅಭ್ಯರ್ಥಿಗಳಿಗೆ ಬದಲಿ ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಕೆಎಟಿ ಆದೇಶದ ಬಳಿಕ ಬದಲಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಹಿಂದುಳಿದ ವರ್ಗದಲ್ಲಿ ಪರಿಗಣಿಸುವಾಗ ವಿವಾಹಿತ ಮಹಿಳೆಯರಿಗೆ ಪತಿಯ ಆದಾಯ ಪರಿಗಣನೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ನಿಯಮ ಅನ್ವಯಿಸಿತ್ತು.

Click Here To Watch This Video




logoblog

Thanks for reading GPSTR Recruitment 2022 Court Order Updates

Previous
« Prev Post

No comments:

Post a Comment

If You Have any Doubts, let me Comment Here