About the Counselling Process of Graduate Primary School Teachers for Government Primary Schools in Classes 6 to 8 for the year 2022-23
15000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಆಯ್ಕೆ ಪಟ್ಟಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಏಕ ಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್ ವಿಭಾಗಿಯ ಪೀಠ ರದ್ದು ಮಾಡಿದೆ.
ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ, ನ್ಯಾಯಮೂರ್ತಿ ಎಜಿಎಸ್ ಕಮಲ್ ಅವರಿದ್ದ ವಿಭಾಗಿಯ ಪೀಠ ಶಿಕ್ಷಕರ ನೇಮಕಾತಿಗೆ ಆದೇಶ ನೀಡಿದೆ.
ಮಾರ್ಚ್ 8, 2023 ಆಯ್ಕೆ ಪಟ್ಟಿಯಂತೆ ನೇಮಕಾತಿ ಅಂತಿಮಗೊಳಿಸಲು ಸೂಚನೆ ನೀಡಲಾಗಿದೆ. ಸರ್ಕಾರದ ಅಧಿಸೂಚನೆಯಂತೆ ಆದಾಯ ಪ್ರಮಾಣ ಪತ್ರ ಸಲ್ಲಿಸಿದವರ ಆಯ್ಕೆ ಅಂತಿಮವಾಗಿದೆ. ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸದ ಅಭ್ಯರ್ಥಿಗಳ ಆಯ್ಕೆ ಮುಂದೂಡಲಾಗಿದೆ. ನೊಂದ ಅಭ್ಯರ್ಥಿಗಳು ಕೆಎಟಿಯಲ್ಲಿ ದಾವೆ ಹೂಡಬಹುದಾಗಿದೆ. ದಾವೆ ಇತ್ಯರ್ಥವಾಗುವವರೆಗೆ ವಿವಾದಿತ ಅಭ್ಯರ್ಥಿಗಳ ಆಯ್ಕೆ ಮುಂದೂಡಿಕೆ ಆಗಿರುತ್ತದೆ.
ಜೂನ್ 8, 2023 ಆಯ್ಕೆ ಪಟ್ಟಿಯಲ್ಲಿ 450 ಅಭ್ಯರ್ಥಿಗಳ ಬದಲಾವಣೆ ಆಗಿದೆ. ಹೊಸ ನೀತಿಯಲ್ಲಿ 450 ಅಭ್ಯರ್ಥಿಗಳಿಗೆ ಬದಲಿ ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಕೆಎಟಿ ಆದೇಶದ ಬಳಿಕ ಬದಲಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಹಿಂದುಳಿದ ವರ್ಗದಲ್ಲಿ ಪರಿಗಣಿಸುವಾಗ ವಿವಾಹಿತ ಮಹಿಳೆಯರಿಗೆ ಪತಿಯ ಆದಾಯ ಪರಿಗಣನೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ನಿಯಮ ಅನ್ವಯಿಸಿತ್ತು.
ಹೈಕೋರ್ಟ್ ಆದೇಶದ ನಂತರ GPSTR ನೇಮಕಾತಿ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಎಲ್ಲ ಶೈಕ್ಷಣಿಕ ಜಿಲ್ಲೆಗಳ ಆಯುಕ್ತರಿಗೆ ಅಭ್ಯರ್ಥಿಗಳ ಕೌನ್ಸೆಲಿಂಗ್ ಪ್ರಕ್ರಿಯೆ ಕೈಗೊಳ್ಳಲು ಮಹತ್ವದ ಸೂಚನೆ ನೀಡಿದ್ದಾರೆ.
Click Here To Download GPSTR Counseling Circular
08-03-2023ರಂದು ಪ್ರಕಟಗೊಂಡ ಎಲ್ಲ ವಿಭಾಗಗಳ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ 1:1 ಅಂತಿಮ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here