Heading: Guidelines related to S.S.L.C. Examination-1 for the year 2023-24
2024ರ ಮಾರ್ಚ್ ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ 1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನ ರಹಿತ ಪ್ರೌಢಶಾಲಾ ಕಾಲೇಜುಗಳಿಂದ (ಪ್ರೌಢಶಾಲಾ ವಿಭಾಗ) ಹಾಜರಾಗುವ ವಿದ್ಯಾರ್ಥಿಗಳನ್ನು ನೋಂದಾಯಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಾಗೆಯೇ ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳು ಸಹ ಈ ಪರೀಕ್ಷೆಗೆ ನೋಂದಾಯಿಸಲು ಅರ್ಜಿಗಳನ್ನು ಶಾಲೆಗಳ ಮುಖಾಂತರ ಸಲ್ಲಿಸಬಹುದಾಗಿದೆ. ಸದರಿ ಶಾಲೆಗಳ ಮುಖ್ಯ ಶಿಕ್ಷಕರು ತಮ್ಮ ಶಾಲೆಯಿಂದ 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ 1ಕ್ಕೆ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳ, ಖಾಸಗಿ ವಿದ್ಯಾರ್ಥಿಗಳ ಮತ್ತು ಪುನರಾವರ್ತಿತ ಅಭ್ಯರ್ಥಿಗಳ ವಿವರಗಳನ್ನು ಮಂಡಳಿಯ kseab.karnataka.gov.in ಜಾಲತಾಣದ ಶಾಲಾ ಮೂಲಕ ಅಪ್ಲೋಡ್ ಮಾಡಲು ಕೆಳಕಂಡಂತೆ ಮಾರ್ಗಸೂಚಿ ಹೊರಡಿಸಲಾಗಿದೆ. ವಿದ್ಯಾರ್ಥಿಗಳ ನೊಂದಣಿಗೆ ಅಗತ್ಯವಿರುವ ಮಾಹಿತಿಗಳನ್ನು ಸಂಗ್ರಹಿಸಿಕೊಂಡು ಮಂಡಳಿ ತಿಳಿಸುವ ದಿನಾಂಕದಲ್ಲಿ ಶಾಲಾ ಲಾಗಿನ್ ನಲ್ಲಿ ವಿದ್ಯಾರ್ಥಿಗಳ ನೊಂದಣಿಯನ್ನು ಮಾಡುವುದು.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ Pdf ಡೌನ್ಲೋಡ್ ಮಾಡಿಕೊಳ್ಳಿ.
No comments:
Post a Comment
If You Have any Doubts, let me Comment Here