Honourable Chief Minister's note not to make validity certificate mandatory for backward class candidates selected in general category
ರಾಜ್ಯ ನಾಗರಿಕ ಸೇವಾ ಹುದ್ದೆಗಳ ಆಯ್ಕೆಯಲ್ಲಿ ಮೀಸಲಾತಿ ಪ್ರಮಾಣಪತ್ರದ ರಿಯಾಯಿತಿ ಪಡೆಯದೆ ಸಾಮಾನ್ಯ ವರ್ಗದ ಹುದ್ದೆಗಳಿಗೆ ಎದುರಾಗಿ ಆಯ್ಕೆಗೊಂಡ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಸಿಂಧುತ್ವ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸದಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಈ ಕುರಿತು ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರಿಗೆ ಸೂಕ್ತ ನಿರ್ದೇಶನ ನೀಡಿರುವ ಅವರು, ಕರ್ನಾಟಕ ಅನಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿಗಳು ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ನಿಯಮಗಳು, 1992 ರ ಅನ್ವಯ ರಾಜ್ಯ ನಾಗರಿಕ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಆಯ್ಕೆಗೊಳ್ಳುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅಂತಿಮ ಆಯ್ಕೆಪಟ್ಟಿಯಲ್ಲಿ, ವಿವಿಧ ಮೀಸಲಾತಿಯಡಿ ಆಯ್ಕೆ ಹೊಂದುವ ಹಾಗೂ ಸದರಿ ಮೀಸಲಾತಿಯಿಂದ ರಿಯಾಯತಿ ಪಡೆಯುವ ಅಭ್ಯರ್ಥಿಗಳು ಸಲ್ಲಿಸಿರುವ ಪ್ರಮಾಣ ಪತ್ರಗಳು ಸಿಂಧುವೇ ಎಂಬ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆಯಬೇಕಾಗುತ್ತದೆ.
No comments:
Post a Comment
If You Have any Doubts, let me Comment Here