ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್, ಎಪಿಎಲ್ ಸೇರಿ ಪಡಿತರ ಚೀಟಿಯಲ್ಲಿನ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ಮೊದಲು ನೀಡಿದ ತಿದ್ದುಪಡಿ ಅವಕಾಶದಲ್ಲಿ ಸರ್ವರ್ ಸಮಸ್ಯೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮತ್ತೊಮ್ಮೆ ಪಡಿತರ ಚೀಟಿದಾರರಿಗೆ ಹೆಸರು ಸೇರ್ಪಡೆ/ತಿದ್ದುಪಡಿಗೆ ಅಕ್ಟೋಬರ್ 16 ರಿಮದ 21 ರವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಿದೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಈ ಮೂಲಕ ತಿಳಿಸಲಾಗಿದೆ.
ಯಾವ ಯಾವ ಜಿಲ್ಲೆಗಳಿಗೆ ತಿದ್ದುಪಡಿ ವಿಸ್ತರಣೆ?
ಅಕ್ಟೋಬರ್ 16, 17 ಮತ್ತು 18 ರಂದು ಬಾಗಲಕೋಟೆ, ಬೆಳಗಾವಿ, ಚಾಮರಾಜಪೇಟೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಗಳಲ್ಲಿ ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ತಿದ್ದಪಡಿ ಮಾಡಿಕೊಳ್ಳಬಹುದಾಗಿದೆ.
ಅಕ್ಟೋಬರ್ 19,20, 21ರಂದು ದಾವಣಗೆರೆ, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ತಿದ್ದುಪಡಿಗೆ ಅವಕಾಶವಿದೆ.
ತಿದ್ದುಪಡಿಗೆ ಬೇಕಾದ ಅವಶ್ಯಕ ದಾಖಲೆಗಳು
ಚಿಕ್ಕ ಮಕ್ಕಳ ಹೆಸರು ಸೇರ್ಪಡೆಗೆ ಮಕ್ಕಳ ಸೇರ್ಪಡೆಗೆ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಜೊತೆಗೆ ತಂದೆ, ತಾಯಿಯ ಆಧಾರ್ ಕಾರ್ಡ್ ಅಗತ್ಯವಾಗಿದೆ. ಇನ್ನು ಇತರರ ಹೆಸರು, ವಿಳಾಸ ತಿದ್ದುಪಡಿಯನ್ನು ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ ಮಾಡಿಕೊಳ್ಳಬಹುದಾಗಿದೆ.
ಆದರೆ ಪಡಿತರ ತಿದ್ದುಪಡಿ ಮಾಡಿಸುವ ವೇಳೆಯಲ್ಲಿ ರೇಷನ್ ಕಾರ್ಡ್, ಬ್ಯಾಂಕ್ ಖಾತೆಯ ಪಾಸ್‌ಬುಕ್, ಆಧಾರ್ ಕಾರ್ಡ್ ಕೊಂಡೊಯ್ಯುವುದು ಉತ್ತಮ. ರಾಜ್ಯ ಸರಕಾರ ಇದೀಗ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಕಲ್ಪಿಸಿದ್ದು, ಈ ಅವಕಾಶವನ್ನು ಜನರು ಸದುಪಯೋಗ ಪಡಿಸಿಕೊಳ್ಳಬೇಕಾಗಿದೆ.
No comments:
Post a Comment
If You Have any Doubts, let me Comment Here