Kannada Rajyotsava Celebration Guidelines
ನವೆಂಬರ್ 1 ಕನ್ನಡದ ಹಬ್ಬ, ಪ್ರತಿಯೊಬ್ಬ ಕನ್ನಡಿಗನೂ ಹೆಮ್ಮೆಪಡುವ ವಿಷಯ. ನವೆಂಬರ್-1ರಂದು ರಾಜ್ಯಾಧ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಕನ್ನಡ ರಾಜ್ಯೋತ್ಸವದ ಆಯೋಜನೆಯನ್ನು ಈ ಮಾರ್ಗಸೂಚಿ ಕ್ರಮದಂತೆ ಆಚರಿಸಬೇಕು ಅಂತ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ.
ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದಂತ ಶಿವರಾಜ ಎಸ್ ತಂಡರಗಿ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಟಿಪ್ಪಣಿ ಹೊರಡಿಸಿ ಆದೇಶಿಸಿದ್ದಾರೆ. ಆ ಆದೇಶದಲ್ಲಿ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದೆ. ಅದರ ಅಂಗವಾಗಿ ಈಗಾಗಲೇ ಸನ್ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಕಾರ್ಯಕ್ರಮದ ಸ್ವರೂಪ ಸಿದ್ಧಪಡಿಸಲಾಗಿದೆ. ಅದರಂತೆ, ಪ್ರತಿ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಡಳಿತ ವತಿಯಿಂದ ಈ ಕೆಳಕಂಡ ಅಂಶಗಳನ್ನು ಅನುಷ್ಠಾನಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವುದು ಹಾಗೂ ಸಂಬಂಧಪಟ್ಟ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಈ ಮೂಲಕ ಸೂಚಿಸಿದೆ ಅಂತ ಹೇಳಿದ್ದಾರೆ.
01. ನವೆಂಬರ್ 1 ರಂದು ರಾಜ್ಯದ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 "ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ" ಎಂಬ ಘೋಷ ವಾಕ್ಯವನ್ನು ಬರೆಯುವಂತೆ ನಾಗರಿಕರಲ್ಲಿ ಮನವಿ ಮಾಡುವುದು.
02.ನವೆಂಬರ್ 1 ರ ಬೆಳಿಗ್ಗೆ 9.00 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೋ) ನಾಡ ಗೀತೆಯನ್ನು ಪ್ರಸಾರ ಮಾಡಲಾಗುವುದು. ಆ ಸಮಯದಲ್ಲಿ ಕನ್ನಡ ನಾಡಿನ ಸಮಸ್ತ ನಾಗರಿಕರು ಎದ್ದು ನಿಂತು ರಾಷ್ಟ್ರ ಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡ ಗೀತೆಗೂ ಗೌರವ ಸಲ್ಲಿಸಲು ಮನವಿ ಮಾಡುವುದು.
03. ನವೆಂಬರ್ | ರ ಸಂಚ 5.00 ಗಂಟೆಗೆ ನಿಮ್ಮ-ನಿಮ್ಮ ಜಿಲ್ಲೆಗಳ ಎಲ್ಲಾ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಆಚರಿಸಲು ಮನವಿ ಮಾಡುವುದು.
04. ನವೆಂಬರ್ 1 ರ ಸಂಜೆ 7.00 ಗಂಟೆಗೆ ನಿಮ್ಮ-ನಿಮ್ಮ ಜಿಲ್ಲೆಗಳ ಎಲ್ಲಾ ಗ್ರಾಮಗಳ ಮನೆಗಳ ಮುಂದೆ, ಕಛೇರಿಗಳ ಮುಂದೆ ಹಾಗೂ ಅ೦ಗಡಿ-ಮಳಿಗೆಗಳ ಮುಂದೆ ಹಣತೆ (ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗುವುದು.
ಮೇಲ್ಕಂಡ ಎಲ್ಲಾ ಅಂಶಗಳ ಬಗ್ಗೆ ಜಿಲ್ಲಾಡಳಿತ ಸೂಕ್ತ ಸುತ್ತೋಲೆಗಳನ್ನು ಹೊರಡಿಸಿ, ಜಿಲ್ಲೆಯ ಎಲ್ಲಾ ನಾಗರಿಕರ ಹಾಗೂ ಸಂಘ ಸಂಸ್ಥೆಗಳ ಸಹಯೋಗ ಪಡೆದು ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳು/ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಕೋರಿದ್ದಾರೆ.
No comments:
Post a Comment
If You Have any Doubts, let me Comment Here