JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Sunday, October 8, 2023

Karnataka Veerashaiva-Lingayat Development Corporation Schemes 2023

  Jnyanabhandar       Sunday, October 8, 2023
Karnataka Veerashaiva-Lingayat Development Corporation has invited applications from eligible candidates belonging to Veerashaiva-Lingayat community for availing loans and subsidies under various Government Schemes.

Candidates aged between 18 and 55 years are eligible to apply. The annual income of the candidates living in rural areas must not be more than Rs. 98,000 while those in urban areas must not exceed Rs. 1,20,000. Interested may download their applications from kvldcl.karnataka.gov.in



2023-24ನೇ ಸಾಲಿನಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವೀರಶೈವ ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ ಅಭಿವೃದ್ದಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಹರಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಸಾಲ ಯೋಜನೆಗಳಡಿ ಬಸವ ಬೆಳಗು ಯೋಜನೆ(ಹೊಸತು, ನವೀಕರಣ), ವಿದೇಶ ವಿದ್ಯಾ ವಿಕಾಸ ಯೋಜನೆ (ಹೊಸತು, ನವೀಕರಣ) ಮತ್ತು ಜೀವ ಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಗಳಡಿ ಸಾಲ ಸೌಲಭ್ಯ ಹಾಗೂ ಸಹಾಯಧನ ನೀಡಲಾಗುವುದು.

ಅಭ್ಯರ್ಥಿಗಳಿಗೆ ಸೂಚನೆಗಳು

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು. ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು/ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

ಅರ್ಹ ಫಲಾಪೇಕ್ಷಿಗಳು ಗ್ರಾಮಒನ್, ಬೆಂಗಳೂರುಒನ್, ಕರ್ನಾಟಕಒನ್, ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು. ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ ಅಥವಾ ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಅರ್ಜಿ ಸಲ್ಲಿಸಲು ಅ.30 ಕೊನೆಯ ದಿನವಾಗಿರುತ್ತದೆ (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ).
ಮಾಹಿತಿಗಾಗಿ ನಿಗಮದ ಜಾಲತಾಣ www.kvldcl.karnataka.gov.in ಅಥವಾ ನಿಗಮದ ದೂ.08022865522, 9900012351 ಗೆ ಸಂಪರ್ಕಿಸಬಹುದು.


ಮಹತ್ವದ ಪ್ರಕಟಣೆಗಳು




ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ ತಾಣಕ್ಕೆ ಬೇಟಿ ನೀಡಿ 
logoblog

Thanks for reading Karnataka Veerashaiva-Lingayat Development Corporation Schemes 2023

Previous
« Prev Post

No comments:

Post a Comment

If You Have any Doubts, let me Comment Here