JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Friday, October 13, 2023

Kuvempu Biography

  Jnyanabhandar       Friday, October 13, 2023
Kuvempu, a celebrated figure in Kannada literature and an influential voice in Indian literature as a whole, left an indelible mark through his literary works, social activism, and philosophical ideologies. Born in a small village in Karnataka, India, Kuvempu's journey from humble beginnings to becoming a renowned poet, playwright, novelist, and essayist is a testament to his talent and determination. Throughout his prolific career, Kuvempu addressed key social issues, emphasized the importance of regional identity, advocated for environmental conservation, and engaged in political discourse. This article explores the life, contributions, and lasting impact of Kuvempu on literature, society, and the quest for environmental sustainability.



ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪- ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು.

ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ 'ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು.






ಕುವೆಂಪು ಅವರ ಜೀವನ

ಬಾಲ್ಯ

ಕುವೆಂಪು ಅವರು ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ ೨೯, ೧೯೦೪ ರಲ್ಲಿ ಜನಿಸಿದರು. ತಂದೆ ವೆಂಕಟಪ್ಪ; ತಾಯಿ ಸೀತಮ್ಮ. ಅವರ ಬಾಲ್ಯ ತಮ್ಮ ತಂದೆಯ ಊರಾದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಕಳೆಯಿತು.

ಕುವೆಂಪು ಅವರ ಕೃತಿಗಳು

ಮಹಾಕಾವ್ಯ
ಶ್ರೀ ರಾಮಾಯಣ ದರ್ಶನಂ (೧೯೪೯)

ಖಂಡಕಾವ್ಯಗಳು
ಚಿತ್ರಾಂಗದಾ (೧೯೩೬)

ಕವನ ಸಂಕಲನಗಳು
ಕೊಳಲು (೧೯೩೦)
ಪಾಂಚಜನ್ಯ (೧೯೩೩)
ನವಿಲು (೧೯೩೪)
ಕಲಾಸುಂದರಿ (೧೯೩೪)
ಕಥನ ಕವನಗಳು (೧೯೩೭)
ಕೋಗಿಲೆ ಮತ್ತು ಸೋವಿಯಟ್ ರಷ್ಯಾ (೧೯೪೪)
ಪ್ರೇಮ ಕಾಶ್ಮೀರ (೧೯೪೬)
ಅಗ್ನಿಹಂಸ (೧೯೪೬)
ಕೃತ್ತಿಕೆ (೧೯೪೬)
ಪಕ್ಷಿಕಾಶಿ (1946)
ಕಿಂಕಿಣಿ (ವಚನ ಸಂಕಲನ) (೧೯೪೬)
ಷೋಡಶಿ (೧೯೪೬)
ಚಂದ್ರಮಂಚಕೆ ಬಾ ಚಕೋರಿ (೧೯೫೭)
ಇಕ್ಷುಗಂಗೋತ್ರಿ (೧೯೫೭)
ಅನಿಕೇತನ (೧೯೬೩)
ಜೇನಾಗುವ (೧೯೬೪)
ಅನುತ್ತರಾ (೧೯೬೫)
ಮಂತ್ರಾಕ್ಷತೆ (೧೯೬೬)
ಕದರಡಕೆ (೧೯೬೭)
ಪ್ರೇತಕ್ಯೂ (೧೯೬೭)
ಕುಟೀಚಕ (೧೯೬೭)
ಹೊನ್ನ ಹೊತ್ತಾರೆ (೧೯೭೬)
ಕೊನೆಯ ತೆನೆ ಮತ್ತು ವಿಶ್ವಮಾನವ ಸಂದೇಶ (೧೯೮೧)

ಕಥಾ ಸಂಕಲನ

ಸಂನ್ಯಾಸಿ ಮತ್ತು ಇತರ ಕಥೆಗಳು (1936)
ನನ್ನ ದೇವರು ಮತ್ತು ಇತರ ಕಥೆಗಳು (1940)

ಕಾದಂಬರಿಗಳು

ಕಾನೂರು ಹೆಗ್ಗಡತಿ (1936)
ಮಲೆಗಳಲ್ಲಿ ಮದುಮಗಳು (1967)

ನಾಟಕಗಳು

ಯಮನ ಸೋಲು (1928)
ಜಲಗಾರ (1928)
ಬಿರುಗಾಳಿ (1930)
ವಾಲ್ಮೀಕಿಯ ಭಾಗ್ಯ (1931)
ಮಹಾರಾತ್ರಿ (1931)
ಸ್ಶಶಾನ ಕುರುಕ್ಷೇತ್ರಂ (1931)
ರಕ್ತಾಕ್ಷಿ (1933)
ಶೂದ್ರ ತಪಸ್ವಿ (1944)
ಬೆರಳ್‍ಗೆ ಕೊರಳ್ (1947)
ಬಲಿದಾನ (1948)
ಚಂದ್ರಹಾಸ (1963)
ಕಾನೀನ (1974)

ಪ್ರಬಂಧ
ಮಲೆನಾಡಿನ ಚಿತ್ರಗಳು (1933)
ವಿಮರ್ಶೆ
ಕಾವ್ಯವಿಹಾರ (1946)
ತಪೋನಂದನ (1950)
ವಿಭೂತಿಪೂಜೆ (1953)
ದ್ರೌಪದಿಯ ಶ್ರೀಮುಡಿ (1960)
ರಸೋ ವೈ ಸಃ (1963)
ಇತ್ಯಾದಿ (1970)

ಆತ್ಮಕಥೆ

ನೆನಪಿನ ದೋಣಿಯಲ್ಲಿ: ಕುವೆಂಪು ಮದುವೆ ಪ್ರಸಂಗ

ಜೀವನ ಚರಿತ್ರೆಗಳು
ಸ್ವಾಮಿ ವಿವೇಕಾನಂದ
ರಾಮಕೃಷ್ಣ ಪರಮಹಂಸ

ಗುರುವಿನೊಡನೆ ದೇವರಡಿಗೆ (ಭಾಗ 1, 2) (1954)
ಕೊಲಂಬೋ ಇಂದ ಆಲ್ಮೋರಕೆ
ಭಾಷಣ-ಲೇಖನ
ಸಾಹಿತ್ಯ ಪ್ರಚಾರ (1930)
ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ (1944)
ಷಷ್ಠಿನಮನ (1964)
ಮನುಜಮತ-ವಿಶ್ವಪಥ (1971)
ವಿಚಾರ ಕ್ರಾಂತಿಗೆ ಆಹ್ವಾನ (1976)

ಶಿಶು ಸಾಹಿತ್ಯ
ಅಮಲನ ಕಥೆ (1924)
ಮೋಡಣ್ಣನ ತಮ್ಮ (ನಾಟಕ) (1926)
ಹಾಳೂರು (1926)
ಬೊಮ್ಮನಹಳ್ಳಿಯ ಕಿಂದರಿಜೋಗಿ (1928)
ನನ್ನ ಗೋಪಾಲ (ನಾಟಕ) (1930)
ನನ್ನ ಮನೆ (1946)
ಮೇಘಪುರ (1947)
ಮರಿವಿಜ್ಞಾನಿ (1947)
ನರಿಗಳಿಗೇಕೆ ಕೋಡಿಲ್ಲ (1977)
ಇತರೆ
ಜನಪ್ರಿಯ ವಾಲ್ಮೀಕಿ ರಾಮಾಯಣ

ಆಯ್ದ ಸಂಕಲನಗಳು
ಕನ್ನಡ ಡಿಂಡಿಮ (1968)
ಕಬ್ಬಿಗನ ಕೈಬುಟ್ಟಿ (1973)
ಪ್ರಾರ್ಥನಾ ಗೀತಾಂಜಲಿ (1972)

ನಾಟಕ-ಚಲನಚಿತ್ರ- ಧಾರಾವಾಹಿ

"ಬೆರಳ್‌ಗೆ ಕೊರಳ್" ನಾಟಕವು ಚಲನಚಿತ್ರವಾಗಿದೆ.
"ಕಾನೂರು ಹೆಗ್ಗಡಿತಿ" ಕಾದಂಬರಿ ಚಲನಚಿತ್ರವಾಗಿದೆ.
"ಮಲೆಗಳಲ್ಲಿ ಮದುಮಗಳು" ಕಾದಂಬರಿ ಧಾರಾವಾಹಿಯಾಗಿದೆ ಹಾಗೂ ೯ ಗಂಟೆಗಳ ಅವಧಿಯ ನಾಟಕವಾಗಿಯೂ ಮೈಸೂರಿನ ರಂಗಾಯಣದಲ್ಲಿ ಮತ್ತು ಬೆಂಗಳೂರಿನ ಕಲಾಗ್ರಾಮದಲ್ಲಿ ಪ್ರದರ್ಶನಗೊಂಡಿದೆ.

ಕುವೆಂಪು ಅವರಿಗೆ ಸಂದ ಗೌರವ/ ಪ್ರಶಸ್ತಿ ಪುರಸ್ಕಾರಗಳು

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ - (ಶ್ರೀರಾಮಾಯಣ ದರ್ಶನಂ) (1955)
ಮೈಸೂರು ವಿಶ್ವವಿದ್ಯಾನಿಲಯದಿಂದ ಗೌರವ ಡಿ.ಲಿಟ್. (1956)
ಪದ್ಮಭೂಷಣ (೧೯೫೮)
ರಾಷ್ಟ್ರಕವಿ ಪುರಸ್ಕಾರ (೧೯೬೪)
ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಿ.ಲಿಟ್. (೧೯೬೬)
ಜ್ಞಾನಪೀಠ ಪ್ರಶಸ್ತಿ (ಶ್ರೀ ರಾಮಾಯಣ ದರ್ಶನಂ) (೧೯೬೮)
ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಿ.ಲಿಟ್. (೧೯೬೯)

ಕೇಂದ್ರ ಸಾಹಿತ್ಯ ಅಕಾಡೆಮಿಯು ಫೆಲೋಷಿಪ್ (1979)
ಪಂಪ ಪ್ರಶಸ್ತಿ (೧೯೮೮)
ಪದ್ಮವಿಭೂಷಣ (೧೯೮೮)
ಕರ್ನಾಟಕ ರತ್ನ (೧೯೯೨)
ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಸದಸ್ಯತ್ವ
ಕನ್ನಡ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ (ಮರಣೋತ್ತರ)
ಕುವೆಂಪು ಅವರ 113 ನೇ ಜನ್ಮ ದಿನದಂದು, ಗೂಗಲ್ ಇಂಡಿಯಾ ಅವರ ಗೌರವಾರ್ಥ ಡೂಡಲ್ ಪ್ರದರ್ಶಿಸಿತು.(2017 ಡಿಸೆಂಬರ್ 29)

ಅಧ್ಯಕ್ಷತೆ, ಇತ್ಯಾದಿ

1928ರಲ್ಲಿ ಸೆಂಟ್ರಲ್ ಕಾಲೇಜು ಕರ್ಣಾಟಕ ಸಂಘದ ಆಶ್ರಯದಲ್ಲಿ ನಡೆದ ವಿದ್ಯಾರ್ಥಿ ಕವಿ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯ ಅಧ್ಯಕ್ಷರಾಗಿದ್ದರು.
1957ರಲ್ಲಿ ನಡೆದ 39ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ವಿಶ್ವ ಮಾನವ ದಿನ
ಕರ್ನಾಟಕ ಸರ್ಕಾರವು ೨೦೧೫ರ ಡಿಸೆಂಬರ್‌ನಲ್ಲಿ ಕುವೆಂಪು ಜನ್ಮದಿನವಾದ ಡಿಸೆಂಬರ್‌ ೨೯ ಅನ್ನು "ವಿಶ್ವ ಮಾನವ" ದಿನವನ್ನಾಗಿ ಆಚರಿಸುವುದಾಗಿ ಆದೇಶ ಹೊರಡಿಸಿತು. ಈ ಮೂಲಕ ವಿಶ್ವಮಾನವ ಸಂದೇಶ ಸಾರಿದ ಕವಿಗೆ ಮತ್ತೊಂದು ಗೌರವ ಸಂದಾಯವಾದಂತಾಯ್ತು.
logoblog

Thanks for reading Kuvempu Biography

Previous
« Prev Post

No comments:

Post a Comment

If You Have any Doubts, let me Comment Here