Ration Card Update Dates and Needed Documents
ರಾಜ್ಯ ಸರ್ಕಾರದ ವತಿಯಿಂದ ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯಿಂದ ಸಿಹಿ ಸುದ್ದಿ ಸಿಕ್ಕಿದೆ. ಗೃಹಲಕ್ಷ್ಮಿ, ಅನ್ನ ಭಾಗ್ಯ ಸೇರಿ ವಿವಿಧ ಸರ್ಕಾರಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಹಣ ಜಮೆ ಆಗುವಲ್ಲಿ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡ್‌ನಲ್ಲಿ (Ration Card) ಫಲಾನುಭವಿಗಳ ಹೆಸರು ಸೇರ್ಪಡೆ, ತಿದ್ದುಪಡಿಗೆ ಮಾಡಲು ಅ.5ರಿಂದ ಅವಕಾಶ ನೀಡಲಾಗಿದೆ.
ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆವರೆಗೆ ಬಿಪಿಎಲ್ ಕಾರ್ಡ್ ತಿದ್ದುಪಡಿ ಮಾಡಿಸಬಹುದಾಗಿದೆ. ತಿದ್ದುಪಡಿಗೆ ಮೂರು ಹಂತಗಳಲ್ಲಿ ವಿವಿಧ ಜಿಲ್ಲೆಗಳಿಗೆ ವೇಳಾಪಟ್ಟಿ ನಿಗದಿಪಡಿಸಲಾಗಿದೆ.
ಮೂರು ಹಂತಗಳಲ್ಲಿ ಪಡಿತರ ಚೀಟಿ ತಿದ್ದುಪಡಿ ಮಾಡಲು ಅವಕಾಶ
ಮೊದಲ ಹಂತ: ಅ.5 ರಿಂದ 7ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು
ಎರಡನೇ ಹಂತ: ಅ.8 ರಿಂದ ಅ.10 ರವರೆಗೆ ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಸೇರಿ ಒಟ್ಟು 15 ಜಿಲ್ಲೆಗಳಲ್ಲಿ ಅವಕಾಶ.
3ನೇ ಹಂತ: ಅ.11 ರಿಂದ ಅ.13ರವರೆಗೆ ಕಲಬುರಗಿ, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಸೇರಿ ಒಟ್ಟು 14 ಜಿಲ್ಲೆಗಳಲ್ಲಿ ಅವಕಾಶ.
ಕಳೆದ ತಿಂಗಳು ಒಂದೊಂದು ಜಿಲ್ಲೆಯಲ್ಲೂ ಸಮಯ ನಿಗದಿ ಮಾಡಲಾಗಿದೆ. ಈ ತಿಂಗಳು ಎಲ್ಲಾ ಜಿಲ್ಲೆಗಳಲ್ಲೂ ಮೂರು ದಿನ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.
ಪಡಿತರ ಚೀಟಿಯಲ್ಲಿ ಏನೇನು ತಿದ್ದುಪಡಿ?
ಫಲಾನುಭವಿ ಹೆಸರು ಬದಲಾವಣೆ
ಪಡಿತರ ಕೇಂದ್ರ ಬದಲಾವಣೆ
ಕಾರ್ಡ್ ಸದಸ್ಯರ ಹೆಸರು ರದ್ದು, ಸೇರ್ಪಡೆ
ಕಾರ್ಡ್ ಮುಖ್ಯಸ್ಥರ ಹೆಸರು ಬದಲಾವಣೆ
ಕುಟುಂಬದ ಮುಖ್ಯಸ್ಥರ ಹೆಸರು ಬದಲಾವಣೆ
ರೇಷನ್ ಕಾರ್ಡ್ ಅಪ್ ಡೇಟ್ ಮಾಡಲು ಏನೆಲ್ಲಾ ದಾಖಲೆಗಳು ಬೇಕು..?
ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗೆ ಆಧಾರ್ ನೊಂದಿಗೆ ಆದಾಯ ಪ್ರಮಾಣ ಪತ್ರ ನೀಡಬೇಕಿದ್ದು, ಆರು ವರ್ಷದೊಳಗಿನ ಮಕ್ಕಳ ಸೇರ್ಪಡೆಗೆ ಮೊಬೈಲ್ ನಂಬರ್ ಜೋಡಣೆಯಾಗಿರುವ ಆಧಾರ ಸಂಖ್ಯೆ ಮತ್ತು ಜನನ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.
ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.
No comments:
Post a Comment
If You Have any Doubts, let me Comment Here