Regarding exam exemption for students with special needs studying in classes 1 to 9
ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ ಪರೀಕ್ಷಾ ವಿನಾಯಿತಿ ಪರೀಕ್ಷೆಯಲ್ಲಿ ಸುಧಾರಣೆಗಳು, ರಿಯಾಯಿತಿ, ವಿನಾಯಿತಿ ಸೌಲಭ್ಯಗಳನ್ನು ಒದಗಿಸುವ ಕುರಿತು ರಾಜ್ಯ ಯೋಜನಾ ನಿರ್ದೇಶಕರು ಸಮಗ್ರ ಶಿಕ್ಷಣ ಕರ್ನಾಟಕ ರವರ ಅಧ್ಯಕ್ಷತೆಯಲ್ಲಿ ದಿನಾಂಕ 13-7-2022 ರಂದು ನಡೆದ ಸಭೆಯ ನಡಾವಳಿ ಕ್ರಮ ಸಂಖ್ಯೆ 2ರಲ್ಲಿ 10 ಮತ್ತು 12ನೇ ತರಗತಿಗೆ ನೀಡಿರುವಂತೆ 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೂ ರಿಯಾಯಿತಿ/ವಿನಾಯಿತಿ ಸೌಲಭ್ಯಗಳನ್ನು ಒದಗಿಸಲು ನಿರ್ಣಯವಾಗಿರುತ್ತದೆ.
ಈ ಹಿನ್ನೆಲೆಯಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಒದಗಿಸಬೇಕಿರುವ ಪರೀಕ್ಷಾ ಸಂಬಂಧಿತ ಸೌಲಭ್ಯಗಳ ಪಟ್ಟಿಯನ್ನು ಹಾಗೂ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಪಡೆಯಲು ಅಗತ್ಯವಿರುವ ಪ್ರಮಾಣ ಪತ್ರ ಪಡೆಯಲು ವಿವರಗಳನ್ನು ಒದಗಿಸಲಾಗಿದ್ದು 1ರಿಂದ 9ನೇ ತರಗತಿವರೆಗಿನ ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಪರೀಕ್ಷಾ ವಿನಾಯಿತಿ ನೀಡುವ ಬಗ್ಗೆ ಆದೇಶ ಹೊರಡಿಸಲು ಕೋರಿರುತ್ತಾರೆ.
ರಾಜ್ಯ ಯೋಜನಾ ನಿರ್ದೇಶಕರು ಸಮಗ್ರ ಶಿಕ್ಷಣ ಕರ್ನಾಟಕ ರವರ ಪ್ರಸ್ತಾವನೆಗೆ ಸಂಬಂಧಿಸಿದಂತೆ ಒಂದರಿಂದ ಒಂಬತ್ತನೇ ತರಗತಿವರೆಗಿನ ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ರಿಯಾಯಿತಿ/ವಿನಾಯಿತಿ ಸೌಲಭ್ಯಗಳನ್ನು ಒದಗಿಸಲು ಸರ್ಕಾರವು ತೀರ್ಮಾನಿಸಲಾಗಿದ್ದು ಅದರಂತೆ ಈ ಕೆಳಕಂಡ ಆದೇಶ.
ಆದೇಶ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here