Regarding filling the post of Data Entry Operator for Gram Panchayats through direct recruitment
ರಾಜ್ಯದ ಪ್ರತಿ ಗ್ರಾಮ ಪಂಚಾಯತಿಗಳಿಗೂ ಹೊಸದಾಗಿ ಒಂದು ಡಾಟಾ ಎಂಟ್ರಿ ಆಪರೇಟರ್ ಹುದ್ದೆಯನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳುವ ಕುರಿತು ಆದೇಶ
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿ ಸಿಬ್ಬಂದಿ ಸ್ವರೂಪ, ವೇತನ ಶ್ರೇಣಿಗಳು, ನೇಮಕಾತಿ ನಿಧಾನ ಮತ್ತು ಇತರ ಸೇವಾ ಷರತ್ತುಗಳು, ನಿಯಮಗಳು) 2020ರಂದು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನೇಮಕಾತಿ ವಿಧಾನ ವಿದ್ಯಾರ್ಹತೆ ಆಯ್ಕೆ ಸಮಿತಿ ನಿಗದಿಪಡಿಸಿ ಆದೇಶಿಸಲಾಗಿರುತ್ತದೆ.
ಡಾಟಾ ಎಂಟ್ರಿ ಆಪರೇಟರ್'ಗಳ ನೇರ ನೇಮಕಾತಿಗೆ ಸದರಿ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲೆಯನ್ನು ಒಂದು ಜೇಷ್ಠತಾ ಘಟಕವೆಂದು ಪರಿಗಣಿಸಿ ಉಲ್ಲೇಖ(1)ರಲ್ಲಿ ನಿರ್ದೇಶಿಸಿರುವಂತೆ ಜಿಲ್ಲಾಮಟ್ಟದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯ ಸಮಿತಿಯಲ್ಲಿ ಆಯ್ಕೆ ಮಾಡಿಕೊಳ್ಳತಕ್ಕದ್ದು ಹಾಗೂ ಸದರಿ ಹುದ್ದೆಗೆ ಆಯ್ಕೆಯಾದ ನೌಕರರಿಗೆ ಬಾಪೂಜಿ ಸೇವಾ ಕೇಂದ್ರದಲ್ಲಿ ಸಂಗ್ರಹವಾಗುವ ಮೊತ್ತದಿಂದ ವೇತನವನ್ನು ಪಾವತಿಸಲು ಈ ಮೂಲಕ ಸೂಚಿಸಿದೆ.
No comments:
Post a Comment
If You Have any Doubts, let me Comment Here