State Government Order About Clear the encroachment of 'Bandadiari', 'Kaludari' on private land.
ರಾಜ್ಯದ ಅನೇಕ ರೈತರು ತಮ್ಮ ಜಮೀನಿಗೆ ಹೋಗುವದಕ್ಕೆ ಕಾಲು ದಾರಿ, ಬಂಡಿದಾರಿಗಳನ್ನು ಅವಲಂಬಿಸಿದ್ದಾರೆ. ಆದರೆ ಕೆಲ ಪಟ್ಟಭದ್ರ ಹಿತಾಸಕ್ತಿಗಳ ಕಾರಣ ಈ ದಾರಿ ನಕಾಶೆಯಲ್ಲಿ ಇಲ್ಲ ಹಾಗೆ ಹೀಗೆ ಅಂತ ಅದಕ್ಕೂ ತಡೆ ಒಡ್ಡಿರೋ ಘಟನೆಗಳು ರಾಜ್ಯದಲ್ಲಿ ನಡೆದಿವೆ. ಇಂತಹ ಖಾಸಗಿ ಜಮೀನಿನ ಬಂಡಿದಾರಿ, ಕಾಲುದಾರಿಗಳ ಒತ್ತುವರಿಯನ್ನು ತೆರವುಗೊಳಿಸಲು ರಾಜ್ಯ ಸರ್ಕಾರ ಇದೀಗ ಖಡಕ್ ಆದೇಶ ಹೊರಡಿಸಿದೆ.
ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಮ್ಮ.ಸಿ ಅವರು ಸುತ್ತೋಲೆಯನ್ನು ಎಲ್ಲಾ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳಿಗೆ, ಕಂದಾಯ ಆಯುಕ್ತರಿಗೆ ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ದಾರಿ ಸಮಸ್ಯೆ ಇದ್ದು, ಬಳಕೆದಾರರ ರೈತರುಗಳಿಗೆ ತೊಂದರೆಗಳಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಅಂತ ಹೇಳಿದ್ದಾರೆ.
ದಾರಿ ಸಮಸ್ಯೆ ಬಹುಕಾಲದಿಂದಲೂ ಇದ್ದು, ಅಕ್ಕಪಕ್ಕದ ಜಮೀನುಗಳ ರೈತರು ಕೆಲವು ಖಾಸಗಿ ಜಮೀನುಗಳನ್ನು ದಾಟಿಕೊಂಡು, ಕೃಷಿ ಪೂರಕ ಚಟುವಟಿಕೆಗಳನ್ನು ಜರುಗಿಸಲು ಹಾಗೂ ಬೆಳೆದ ಫಸಲನ್ನು ಹೊರತರಲಾಗದೇ ನಷ್ಟ ಹೊಂದುತ್ತಿರುವುದು ಕೇವಲ ಮಾಧ್ಯಮಗಳಿಂದ ತಿಳಿದು ಬಂದಿರುತ್ತದೆ. ಈ ಬಗ್ಗೆ ಸಾರ್ವಜನಿಕರಿದಂ ಮನವಿ, ದೂರುಗಳು ಸ್ವೀಕೃತವಾಗಿರುತ್ತವೆ ಎಂದಿದ್ದಾರೆ.
ಗ್ರಾಮ ನಕಾಶೆ ಕಂಡ ದಾರಿಗಳಲ್ಲಿ ಬಳಕೆದಾರ ರೈತರು ತಿರುಗಾಡಲು ಅವಕಾಶವಿದ್ದಾಗ್ಯೂ ಕೆಲವು ಭೂಮಾಲೀಕರು ಬಳಕೆದಾರ ರೈತರುಗಳಿಗೆ ತಿರುಗಾಡಲು ಅಡ್ಡಿಪಡಿಸುತ್ತಿರುವುದು ಕಂಡು ಬಂದಿರುತ್ತದೆ. ಅಂತಹ ಜಾಗಗಳನ್ನು ಮುಚ್ಚಿರುವುದು, ರೈತರು ಬಹುಕಾಲದಿಂದಲೂ ಬಳಸುವ ದಾರಿಗಳಲ್ಲಿ ತಿರುಗಾಡಲು ಕೆಲವು ರೈತರು ಮಧ್ಯದ ವೈಯಕ್ತಿಕ ದ್ವೇಷ, ಅಸೂಯೆಗಳು ಮತ್ತು ಹೊಂದಾಣಿಕೆಯ ಕೊರತೆಯಿಂದಾಗಿ ಬಳಕೆದಾರ ರೈತರ ತೊಂದರೆಗಳಿಗೆ ಬಹುತೇಕ ಕಾರಣಗಳಾಗಿರುವುದು ಕಂಡು ಬರುತ್ತದೆ ಎಂದು ಹೇಳಿದ್ದಾರೆ.
ಈ ಎಲ್ಲಾ ಕಾರಣಗಳಿಂದ ಕರ್ನಾಟಕ ಭೂ ಕಂದಾಯ ನಿಯಮಗಳು 1966ರ ನಿಯಮ 59ರಲ್ಲಿ ದಾರಿಯ ಹಕ್ಕುಗಳು ಮತ್ತು ಇತರೆ ಅನುಭೋಗದ ಹಕ್ಕುಗಳ ಬಗ್ಗೆ ತೆಳಿಸಲಾಗಿದ್ದು, ಸಂಬಂಧಪಟ್ಟ ಜಮೀನುಗಳ ಭಾಗಿದಾರರು ಒಪ್ಪಿರುವಂತಹ ಸಂದರ್ಭಗಳ ದಾಖಲೆ ರಿಜಿಸ್ಟರ್ ನಲ್ಲಿ ನಮೂದು ಮಾಡಲು ಅವಕಾಶವಿರುತ್ತದೆ ಅಂತ ತಿಳಿಸಿದ್ದಾರೆ.
ತಾಲ್ಲೂಕಿನ ತಹಶೀಲ್ದಾರರು ನಕಾಶೆ ಕಂಡ ಕಾಲುದಾರಿ, ಬಂಡಿದಾರಿ ಅಥವಾ ರಸ್ತೆಗಳಲ್ಲಿ ಅನ್ಯ ಕೃಷಿ ಬಳಕೆದಾರರು ತಿರುಗಾಡಲು ಅವಕಾಶ ನೀಡದೆ ಅಡ್ಡಿಪಡಿಸುವಂತಹ ಅಥವಾ ಬಳಸಲು ಮುಚ್ಚಿರುವಂತಹ ಸಂದರ್ಭದಲ್ಲಿ ಅವುಗಳನ್ನು ತೆರವುಗೊಳಿಸಿ, ಅಂತಹ ತಿರುಗಾಡಲು ದಾರಿಗಳನ್ನು ಸುಗಮಗೊಳಿಸಲು ಕ್ರಮವಹಿಸುವಂತೆ ಸೂಚಿಸಿದ್ದಾರೆ.
No comments:
Post a Comment
If You Have any Doubts, let me Comment Here