About Placement Counseling for KREIS Additional Selection List Candidates
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದ ವಸತಿ ಶಾಲೆಗಳಲ್ಲಿ ಖಾಲಿ ಇರುವ ಗ್ರೂಪ್ ಸಿ ವೃಂದದ ಹೆಚ್ಚುವರಿ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಕನ್ನಡ, ಆಂಗ್ಲ ಭಾಷೆ, ವಿಜ್ಞಾನ, ಗಣಿತ, ಗಣಕಯಂತ್ರ, ದೈಹಿಕ ಶಿಕ್ಷಣ ಶಿಕ್ಷಕರ ಹಾಗೂ ಪ್ರಥಮ ದರ್ಜೆ ಸಹಾಯಕ, ನಿಲಯ ಪಾಲಕರು ಹಾಗೂ ಶುಶ್ರೂಷಕರ ಹುದ್ದೆಗಳ ನೇಮಕಾತಿಯನ್ನು ಕರ್ನಾಟಕ ಲೋಕಸೇವಾ ಆಯೋಗದ ಮುಖಾಂತರ ಹಮ್ಮಿಕೊಂಡಿದ್ದು ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಆಯೋಗವು ಪ್ರಕಟಿಸಿದೆ. ಸದರಿ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾಗಿ ಸಂಘದಿಂದ ಆಯೋಜಿಸಲಾಗಿರುವ ದಾಖಲಾತಿ ಪರಿಶೀಲನೆಗೆ ಹಾಜರಾಗಿರುವ ಅಭ್ಯರ್ಥಿಗಳ ಸ್ಥಳ ನಿಯುಕ್ತಿಗಾಗಿ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಈ ಕೆಳಕಂಡಂತೆ ಆಯೋಜಿಸಿದೆ.
ಕನ್ನಡ ಭಾಷಾ ಶಿಕ್ಷಕರು, ಇಂಗ್ಲಿಷ್ ಶಿಕ್ಷಕರು, ವಿಜ್ಞಾನ ಶಿಕ್ಷಕರು ಮತ್ತು ಗಣಿತ ಶಿಕ್ಷಕರಿಗೆ ದಿನಾಂಕ 29-11-2023ರಂದು ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಯುತ್ತದೆ.
SDA ಕಮ್ ಕಂಪ್ಯೂಟರ್ ಆಪರೇಟರ್, ಕಂಪ್ಯೂಟರ್ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ನಿಲಯ ಪಾಲಕರು ಮತ್ತು ಶುಶ್ರೂಷಕರ ಹುದ್ದೆಗಳಿಗೆ 01-12-2023ರಂದು ಕೌನ್ಸಿಲಿಂಗ್ ಪ್ರಕ್ರಿಯೆ ನಡೆಯುತ್ತದೆ.
ಅಧಿಕೃತ ಮಾಹಿತಿ ಪಡೆಯಲು ಈ ಕೆಳಗಿನ ಫೈಲ್ ಡೌನ್ಲೋಡ್ ಮಾಡಿಕೊಳ್ಳಿ.
No comments:
Post a Comment
If You Have any Doubts, let me Comment Here