Clarification regarding permission to undertake educational tour in the year 2023-24
ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಸುತ್ತೋಲೆ ಹೊರಡಿಸಲಾಗಿದೆ. ಆದರೆ ಉಲ್ಲೇಖ-2ರಲ್ಲಿ ಉಪನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಉತ್ತರ ಜಿಲ್ಲೆ ಇವರು, ಕೆಲವು ಶಾಲೆಯವರು ರಾಜ್ಯಕ್ಕೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಮನವಿ ಸಲ್ಲಿಸಿರುತ್ತಾರೆ. ಆದರೆ ದಿನಾಂಕ 14-11-2022ರ ಸುತ್ತೋಲೆಯಲ್ಲಿ ಹೊರ ರಾಜ್ಯಕ್ಕೆ ಪ್ರವಾಸ ಕೈಗೊಳ್ಳಲು ಅನುಮತಿ ನೀಡುವ ಕುರಿತು ಯಾವುದೇ ನಿರ್ದೇಶನವಿರುವುದಿಲ್ಲ. ಆದ್ದರಿಂದ ಈ ಬಗ್ಗೆ ಅನುಮತಿ ನೀಡುವ ಕುರಿತು ಮಾರ್ಗದರ್ಶನ ಕೋರಿರುತ್ತಾರೆ.
ಅದರಂತೆ ಪರಿಶೀಲಿಸಲಾಗಿ ಪ್ರತಿ ಶೈಕ್ಷಣಿಕ ವರ್ಷ ರಾಜ್ಯದ ಪ್ರಾರ್ಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ದೇಶದಾದ್ಯಂತ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಉಲ್ಲೇಖ-1ರ ಸುತ್ತೋಲೆಯಲ್ಲಿನ ಷರತ್ತುಗಳನ್ವಯ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅನುಮತಿ ನೀಡಲು ಸೂಚಿಸಿದೆ ಹಾಗೂ ಉಲ್ಲೇಖಿತ ಸುತ್ತೋಲೆಯ ಷರತ್ತು 8ರ ಜೊತೆಗೆ ಸದರಿ ಶೈಕ್ಷಣಿಕ ಪ್ರವಾಸವನ್ನು ಭಾರತೀಯ ರೈಲ್ವೆಯ ರೈಲುಗಳಲ್ಲಿ ಹಮ್ಮಿಕೊಳ್ಳಬಹುದು ಎಂದು ತಿಳಿಸಿದೆ ಉಳಿದಂತೆ ಉಲ್ಲೇಖ-1ರ ಸುತ್ತೋಲೆಯಲ್ಲಿನ ಅಂಶಗಳು ಯಥಾವತ್ತಾಗಿ ಮುಂದುವರೆಯುತ್ತವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಸುತ್ತೋಲೆ ಡೌನ್ಲೋಡ್ ಮಾಡಿಕೊಳ್ಳಿ.
No comments:
Post a Comment
If You Have any Doubts, let me Comment Here