Extension of term 7th State Pay Commission-reg
ವೇತನ ಪರಿಷ್ಕರಣೆಗಾಗಿ ಕಾದು ಕುಳಿತಿರುವ ರಾಜ್ಯ ಸರ್ಕಾರಿ ನೌಕರರಿಗೆ ನಿರಾಸೆ ಮೂಡಿಸುವ ಸುದ್ದಿಯೊಂದಿದೆ. ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಸುಧಾಕರ್ ರಾವ್ ಅಧ್ಯಕ್ಷತೆಯ 7ನೇ ರಾಜ್ಯ ವೇತನ ಆಯೋಗವನ್ನು ರಚನೆ ಮಾಡಿದೆ.
ಈ ಆಯೋಗದ ಅವಧಿ ನವೆಂಬರ್ 19ಕ್ಕೆ ಅಂತ್ಯಗೊಳ್ಳಲಿದೆ.
ಕರ್ನಾಟಕ ಸರ್ಕಾರಕ್ಕೆ 7ನೇ ರಾಜ್ಯ ವೇತನ ಆಯೋಗ ನವೆಂಬರ್‌ನಲ್ಲಿ ವರದಿ ನೀಡಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಈಗ ಸರ್ಕಾರ ರಾಜ್ಯ 7ನೇ ವೇತನ ಆಯೋಗದ ಅವಧಿಯನ್ನು ಮತ್ತೆ ಆರು ತಿಂಗಳು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಸರ್ಕಾರ ಈಗಾಗಲೇ ರಾಜ್ಯ ಸರ್ಕಾರಿ ನೌಕರರು ಮುಷ್ಕರ ಆರಂಭಿಸಿದಾಗ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಮೂಲ ವೇತನದ ಶೇ 17ರಷ್ಟು ಮಧ್ಯಂತರ ಪರಿಹಾರವನ್ನು ನೀಡಿದೆ. ಬಜೆಟ್‌ನಲ್ಲಿ ನಿರೀಕ್ಷೆ ಮಾಡಿದ ಆದಾಯ ಸಂಗ್ರಹಕ್ಕೆ ಸರ್ಕಾರ ಮುಂದಾಗಿದ್ದು, ವೇತನ ಆಯೋಗದ ವರದಿಯನ್ನು ಮುಂದಿನ 2024-25ನೇ ಸಾಲಿನ ಬಜೆಟ್ ಸಮಯದಲ್ಲಿ ಸ್ವೀಕಾರ ಮಾಡಲಾಗುತ್ತದೆ.
ವೇತನ ಆಯೋಗ ಕರ್ನಾಟಕ ಸರ್ಕಾರದ ಪರಿಶೀಲನಾರ್ಹ ಅಂಶಗಳ ಕುರಿತು ಈಗಾಗಲೇ ಆದೇಶ ಹೊಡಿಸಿದೆ. ರಾಜ್ಯ ಸರ್ಕಾರಿ ನೌಕರರ ಸಂಘ, ಸಚಿವಾಲಯ ನೌಕರರ ಸಂಘ ಸೇರಿದಂತೆ ವಿವಿಧ ಸಂಘಗಳು, ನೌಕರರ ಸಂಘಟನೆಗಳ ಜೊತೆ ಸಭೆಯನ್ನು ನಡೆಸಿ ಆಯೋಗದ ವರದಿ ಶಿಫಾರಸು ಸಿದ್ಧಗೊಳಿಸಿತ್ತು. ಆದರೆ ಆಯೋಗದ ವರದಿ ವಿಸ್ತರಣೆ ಮಾಡಿದೆ.
No comments:
Post a Comment
If You Have any Doubts, let me Comment Here