Regarding the assignment to the schools for the teachers who have been selected for the year 2022-23 in the government primary schools, the graduate primary teachers have selected the Deputy Director's office and reported to the schools.
2023-24ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ಪದವೀಧರ ಪ್ರಾಥಮಿಕ ಶಿಕ್ಷಕರು ಆಯ್ಕೆಯಾಗಿ ಉಪನಿರ್ದೇಶಕರ ಕಛೇರಿಯನ್ನು ಆಯ್ಕೆ ಮಾಡಿಕೊಂಡು ವರದಿ ಮಾಡಿಕೊಂಡಿರುವ ಶಿಕ್ಷಕರುಗಳಿಗೆ ಶಾಲೆಗಳಿಗೆ ನಿಯೋಜಿಸುವ ಕುರಿತಂತೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆಯನ್ನು ನೀಡಿದೆ.
2022-23 ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಖಾಲಿ ಹುದ್ದೆಗಳಿಗೆ ಆಯ್ಕೆಯಾದ ಅರ್ಹ ಪದವೀಧರ ಪ್ರಾಥಮಿಕ ಶಿಕ್ಷಕರು (6 ರಿಂದ 8ನೇ ತರಗತಿ) ಹುದ್ದೆಗೆ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿ ಸಂಬಂಧ ಉಲ್ಲೇಖಿತ ಪತ್ರದಲ್ಲಿ ಸೂಚನೆಗಳನ್ನು ನೀಡಲಾಗಿತ್ತು.
ಕೆಲವೊಂದು ಜಿಲ್ಲೆಗಳಲ್ಲಿ ‘4 ವಲಯದಲ್ಲಿ ಖಾಲಿ ಹುದ್ದೆಗಳು ಲಭ್ಯವಿಲ್ಲದ ಪ್ರಯುಕ್ತ ಅಂತಹ ಶಿಕ್ಷಕರುಗಳಿಗೆ ಆಯಾ ವ್ಯಾಪ್ತಿಯ ಉಪನಿರ್ದೇಶಕರ ಕಛೇರಿ (ಆಡಳಿತ)/ಡಯಟ್ ಕಛೇರಿಯನ್ನು ಕೌನ್ಸಿಲಿಂಗ್‌ನಲ್ಲಿ ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಆಯ್ಕೆ ಮಾಡಿಕೊಂಡಿರುವ ಶಿಕ್ಷಕರುಗಳು ಉಪನಿರ್ದೇಶಕರ ಕಛೇರಿ (ಆಡಳಿತ)ಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವ ಶಿಕ್ಷಕರನ್ನು ತಕ್ಷಣವೆ ಆಯಾ ಜಿಲ್ಲಾ ವ್ಯಾಪ್ತಿಯಲ್ಲಿನ ಖಾಲಿ ಹುದ್ದೆಗಳಿರುವ ಒಂದು ಪ್ರಾಥಮಿಕ ಶಾಲೆಗಳಿಗೆ ನಿಯೋಜಿಸುವ ಸಂಬಂಧ ಈ ಅಧಿಕೃತ ಆದೇಶದಲ್ಲಿರುವ ಅಂಶಗಳನ್ನು ಪಾಲಿಸಿ ಕ್ರಮವಹಿಸಲು ಸೂಚಿಸಿದೆ.
No comments:
Post a Comment
If You Have any Doubts, let me Comment Here