JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Friday, November 3, 2023

HK GPSTR Counseling Selection List 2022

  Jnyanabhandar       Friday, November 3, 2023

HK GPSTR Counseling Selection List 2022

13,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ( GPSTR  ) ಅಂತಿಮ ಆಯ್ಕೆ ಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿತ್ತು. ಈ ಬಳಿಕ ಕೆಲ ಜಿಲ್ಲೆಗಳಲ್ಲಿ  ಕೌನ್ಸೆಲಿಂಗ್ ಮೂಲಕ ಸ್ಥಳ ಆಯ್ಕೆ ಪ್ರಕ್ರಿಯೆ ನಡೆದು, ಖಾಲಿ ಹುದ್ದೆಗಳಿಗೆ ನಿಯೋಜಿಸಲಾಗಿದೆ.

ಈಗ ಮುಂದುವರೆದು ಕಲ್ಯಾಣ ಕರ್ನಾಟಕ ಜಿಲ್ಲೆಗಳು ಮತ್ತು ಬೆಂಗಳೂರು ಉತ್ತರ, ದಕ್ಷಿಣ ಜಿಲ್ಲೆಗಳ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸೋದಕ್ಕೆ 04-11-2023ರಿಂದ ದಿನಾಂಕ ನಿಗದಿ ಪಡಿಸಲಾಗಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, "ಪದವೀಧರ ಪ್ರಾಥಮಿಕ ಶಿಕ್ಷಕ ( Primary School Teacher ) (6 ರಿಂದ 8ನೇ ತರಗತಿ) ನೇಮಕಾತಿ-2022 ಕ್ಕೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ಜಿಲ್ಲೆಗಳು ಮತ್ತು ಬೆಂಗಳೂರು ಉತ್ತರ ಹಾಗೂ ದಕ್ಷಿಣ ಜಿಲ್ಲೆಗಳ 371ಜೆ ಹುದ್ದೆಗಳ ಬಗ್ಗೆ ಮಾನ್ಯ ನ್ಯಾಯಾಲಯಗಳಲ್ಲಿ ಪ್ರಕರಣಗಳಿದ್ದ ಕಾರಣದಿಂದ ತಡೆ ಹಿಡಿಯಲಾಗಿದ್ದ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಮಾನ್ಯ ಉಚ್ಚ ನ್ಯಾಯಾಲಯದ ರಿಟ್ ಅರ್ಜಿ ಸಂ.23162/2023, 23450/2023 ರಲ್ಲಿನ ದಿನಾಂಕ: 30/10/2023ರ ಆದೇಶ ಮತ್ತು ಇಡೀ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಈಗಾಗಲೇ ರಿಟ್ ಅಪೀಲು ಸಂಖ್ಯೆ: 305/2023 ರಲ್ಲಿನ ದಿನಾಂಕ: 12/10/2023ರ ಅದೇಶದ ತೀರ್ಪಿನ ಹಿನ್ನೆಲೆಯಲ್ಲಿ ನ್ಯಾಯಾಲಯಗಳ ಆದೇಶದಿಂದ ಪ್ರಭಾವಿತವಾಗಬಹುದಾದ ಹುದ್ದೆಗಳನ್ನು ಕಾಯ್ದಿರಿಸಿ ಉಳಿದ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್‌ನ್ನು ಮುಂದುವರೆಸಲಾಗಿದೆ ಎಂದು ಹೇಳಿದೆ.

ಈ ಬಗ್ಗೆ ಸದರಿ 371 ಜೆ ಹುದ್ದೆಗಳಿರುವ (ಶೇಕಡ 80 ರ ಸ್ಥಳೀಯ ವೃಂದ, ಶೇಕಡ 20ರ ಮಿಕ್ಕುಳಿದ ವೃಂದ ಮತ್ತು ಶೇಕಡ 8ರ ರಾಜ್ಯ ಮಟ್ಟದ ಸ್ಥಳೀಯ ವೃಂದದ ಹುದ್ದೆಗಳು) 09 ಜಿಲ್ಲೆಗಳಾದ ಬೀದರ್, ಕಲಬುರ್ಗಿ, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ, ವಿಜಯನಗರ, ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲೆಗಳ ಕುರಿತಾಗಿ ANDO: 08/03/2023 ರಂದು ಪ್ರಕಟಿತ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಿಲಿಂಗ್‌ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ದಿನಾಂಕ: 02/11/2023 ರಂದು ಶಾಲಾ ಶಿಕ್ಷಣ ಇಲಾಖೆಯ ವೆಬ್ ಸೈಟ್ schooleducation.karnataka.gov.in ನಲ್ಲಿ ಪ್ರಕಟವಾಗಿವೆ.

ಸದರಿ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಕ್ರಮವಾಗಿ ಗಣಿತ ಮತ್ತು ವಿಜ್ಞಾನ, ಸಮಾಜ ವಿಜ್ಞಾನ, ಜೀವ ವಿಜ್ಞಾನ ಮತ್ತು ಆಂಗ್ಲಭಾಷಾ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸಿಲಿಂಗ್‌ನ್ನು ದಿನಾಂಕ: 04/11/2023 ರಿಂದ ಬೆಳಿಗ್ಗೆ 10.30 ಗಂಟೆಯಿಂದ ಆಯಾ ಜಿಲ್ಲಾ ನೇಮಕಾತಿ ಪ್ರಾಧಿಕಾರಿಯವರಾದ ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರ ಕಛೇರಿಯಲ್ಲಿ ನಡೆಸಲಾಗುವುದು. ಅದ್ದರಿಂದ ಅಭ್ಯರ್ಥಿಗಳು ಇಲಾಖಾ ವೆಬ್ ಸೈಟ್‌ನಲ್ಲಿರುವಂತೆ ಎಲ್ಲಾ ಅಗತ್ಯ ವಿವರಗಳನ್ನು ಪಡೆದುಕೊಂಡು ಸಕಾಲದಲ್ಲಿ ಕೌನ್ಸಿಲಿಂಗ್ ಸ್ಥಳದಲ್ಲಿ ಭಾವ ಚಿತ್ರವಿರುವ ಗುರುತಿನ ಚೀಟಿ ಮತ್ತು ನೇಮಕಾತಿಗೆ ಸಂಬಂಧಪಟ್ಟಂತೆ ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಾಗುವುದು.
ಹೆಚ್ಚಿನ ವಿವರಗಳಿಗೆ ಸಂರ್ಪಕಿಸುವಂತೆ ಹೇಳಿದೆ.Click Here To Download Bangalore North District List 


Bangalore South District List 

Download Kalaburagi List 

Download Koppal List

Download Bidar District List

Download Yadagiri District List 

Download Ballari District List

Download Rayachuru District List

Download Vijayanagar District List 

logoblog

Thanks for reading HK GPSTR Counseling Selection List 2022

Previous
« Prev Post

No comments:

Post a Comment

If You Have any Doubts, let me Comment Here