HSRP Number Plate Date
2019, ಏಪ್ರಿಲ್ 1ರ ನಂತರ ಖರೀದಿಸಿದಂತ ವಾಹನಗಳಿಗೆ HSRP ನಂಬರ್ ಪ್ಲೇಟ್ ( HSRP Number Plate ) ಅಳವಡಿಸೋದು ಕಡ್ಡಾಯಗೊಳಿಸಲಾಗಿತ್ತು. ಇದಕ್ಕಾಗಿ ನವೆಂಬರ್.17 ಡೆಡ್ ಲೈನ್ ನೀಡಲಾಗಿತ್ತು. ಈಗ ಈ ಅವಧಿಯನ್ನು ಫೆ.17, 2024ರವರೆಗೆ ವಿಸ್ತರಿಸಲಾಗಿದೆ.
ಈ ಮೂಲಕ ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಲಾಗಿದೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿರುವಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ( Minister Ramalingareddy ) ಅವರು, ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಕೆಗೆ ಅವಧಿ ವಿಸ್ತರಿಸುವಂತೆ ವಾಹನ ಸವಾರರು ಮನವಿ ಮಾಡಿದ್ದಾರೆ. ಈ ಮನವಿಯ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಿ ಅವಧಿ ವಿಸ್ತರಣೆ ಮಾಡಿದೆ.
ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನೀಡಲಾಗಿರುವಂತ ಗಡುವನ್ನು ನವೆಂಬರ್.17ರಿಂದ ಫೆಬ್ರಬರಿ.17, 2024ರವರೆಗೆ ವಿಸ್ತರಣೆ ಮಾಡೋದಕ್ಕೆ ಚಿಂತನೆ ನಡೆಸಲಾಗುತ್ತಿದೆ. ಈ ಸಂಬಂಧ ಆದೇಶ ಹೊರಡಿಸಲಾಗಿದೆ ಎಂದು ಹೇಳಿದರು.
No comments:
Post a Comment
If You Have any Doubts, let me Comment Here