On effective implementation of Shakti Scheme for free travel for women
ಮಹಿಳೆಯರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಮೊಬೈಲ್ ನಲ್ಲಿ 'ಆಧಾರ್ ಕಾರ್ಡ್' ತೋರಿಸಿ ಪ್ರಯಾಣಿಸಲು ಸಾರಿಗೆ ಸಂಸ್ಥೆ ಅವಕಾಶ ನೀಡಿದ್ದು, ಈ ಬಗ್ಗೆ ಆದೇಶವನ್ನು ಹೊರಡಿಸಲಾಗಿದೆ.
ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ಕರ್ನಾಟಕ ಸರ್ಕಾರವು "ಶಕ್ತಿ ಯೋಜನೆ"ಯಡಿ ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸಾಮಾನ್ಯ ಸ್ಥಾಯಿ ಆದೇಶ ಸಂಖ್ಯೆ: 179 ದಿನಾಂಕ: 07.06.2023 ರಲ್ಲಿ ಅವಕಾಶವನ್ನು ಕಲ್ಪಿಸಿದ್ದು ಹಾಗೂ ಮುಂದುವರೆದ ಉಲ್ಲೇಖಿತ ಪತ್ರ-ತಿರ ತಿದ್ದುಪಡಿ ಆದೇಶದಲ್ಲಿ ಸದರಿ ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಮೂಲನಕಲು/ಡಿಜಿಲಾಕರ್ (Digilocker) ಹಾರ್ಡ್ ಮತ್ತು ಸಾಫ್ಟ್ ಕಾಪಿ) ಮಾದರಿಯಲ್ಲಿ ತೋರಿಸಿದಲ್ಲಿ ಹಾಜರುಪಡಿಸಿದಲ್ಲಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಲು ತಿಳಿಸಲಾಗಿರುತ್ತದೆ.
ಈ ಸಂಬಂಧ, ಉಲ್ಲೇಖಿತ ಆದೇಶಗಳಲ್ಲಿ ತಿಳಿಸಿರುವಂತೆ ಮಹಿಳಾ ಪ್ರಯಾಣಿಕರು ಮೊಬೈಲ್ ನಲ್ಲಿ ತೋರಿಸುವ ಯಾವುದಾದರೂ ಒಂದು ಅಧಿಕೃತ ಗುರುತಿನ ಚೀಟಿಯನ್ನು ಪರಿಗಣಿಸಿ, ಶೂನ್ಯ ಮೊತ್ತದ ಮಹಿಳಾ ಟಿಕೆಟ್ ವಿತರಿಸಲು ಮತ್ತೋಮ್ಮೆ ಎಲ್ಲಾ ನಿರ್ವಾಹಕರಿಗೆ ಸೂಕ್ತ ತಿಳುವಳಿಕೆ ನೀಡಲು ಹಾಗೂ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಆಡಚಣೆಯಾಗದಂತೆ ಹಾಗೂ ದೂರುಗಳಿಗೆ ಆಸ್ಪದ ನೀಡದಂತೆ ಅಗತ್ಯ ಕ್ರಮ ಕೈಗೊಳ್ಳಲು ಈ ಮೂಲಕ ಸೂಚಿಸಲಾಗಿದೆ. ಈ ಬಗ್ಗೆ ದೂರುಗಳು ಸ್ವೀಕೃತಗೊಂಡಲ್ಲಿ ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳುವುದು ಅಂತ ತಿಳಿಸಿದೆ.
No comments:
Post a Comment
If You Have any Doubts, let me Comment Here