Order to delegate powers to BEO to collect salaries for upgraded schools
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ( School Education Department ) ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಸರ್ಕಾರಿ ಪ್ರೌಢಶಾಲೆಯನ್ನಾಗಿ ( Government High School ) ಉನ್ನತೀಕರಿಸಿದ ಶಾಲೆಗಳ ವೇತನ ಸೆಳೆಯಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅಧಿಕಾರವನ್ನು ಪ್ರತ್ಯಾಯೋಜಿಸಿ ಆದೇಶಿಸಲಾಗಿದೆ.
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಬಿ.ಬಿ ಕಾವೇರಿ ಅವರು ಅಧಿಕೃತ ಜ್ಞಾಪನ ಹೊರಡಿಸಿದ್ದು, 2 ರಿಂದ 6ರವರೆಗಿನ ಸರ್ಕಾರಿ ಆದೇಶಗಳನ್ವಯ 2022-23 ಹಾಗೂ 2023-24ನೇ ಸಾಲಿನಲ್ಲಿ ಒಟ್ಟು 111 ಸರ್ಕಾರಿ ಹಿರಿಯ ಪ್ರಾಥಮಿಕ ಉನ್ನತೀಕರಿಸಿದ ಶಾಲೆಗಳನ್ನು ಸರ್ಕಾರಿ ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸಿ ಆದೇಶಿಸಿರುತ್ತಾರೆ ಎಂದಿದ್ದಾರೆ.
ರಾಜ್ಯದ ಉನ್ನತೀಕರಿಸಿ 111 ಸರ್ಕಾರಿ ಪ್ರೌಢಶಾಲೆಗಳಲ್ಲಿ ಮುಖ್ಯ ಶಿಕ್ಷಕರ ಹುದ್ದೆಗಳು ಸೃಜನೆ ಅಥವಾ ಮಂಜೂರಾತಿಯಾಗುವವರೆಗೂ ಸದರಿ ಶಾಲೆಗಳಿಗೆ ಕರ್ತವ್ಯಕ್ಕೆ ಹಾಜರಾದ ಶಿಕ್ಷಕರುಗಳ ವೇತನವನ್ನು ಸರ್ಕಾರದ ಆದೇಶದಲ್ಲಿ ಆಯಾ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಬಟವಾಡೆ ಅಧಿಕಾರಿಯನ್ನಾಗಿ ಕಾರ್ಯ ನಿರ್ವಹಿಸಲು ಪ್ರತ್ಯಾಯೋಜಿಸಿ ನೀಡಿರುವ ಅಧಿಕಾರವನ್ನು ಬಳಸಿ, ಸದರಿ ಶಿಕ್ಷಕರುಗಳ ವೇತನ ಮಾಹೆವಾರು 95+16 ಉನ್ನತೀಕರಿಸಿ ಸರ್ಕಾರಿ ಪ್ರೌಢಶಾಲೆಗಳಿಗೆ ವೇತನ ಸೆಳೆಯಲು ತಿಳಿಸಿದ್ದಾರೆ.
No comments:
Post a Comment
If You Have any Doubts, let me Comment Here