Swavalambi Sarathi Scheme Online Application
ಕರ್ನಾಟಕ ಸರ್ಕಾರವು ಸ್ವಾವಲಂಬಿ ಸಾರಥಿ ಯೋಜನೆಯಡಿ ಸರಕು ವಾಹನ ಅಥವಾ ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ಪಡೆಯಲು ನವೆಂಬರ್ 29ರ ಒಳಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
ಸಹಾಯಧನದ ಮೊತ್ತ:
ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನವನ್ನು ಖರೀದಿಸಲು ರಾಷ್ಟ್ರೀಕೃತ ಬ್ಯಾಂಕ್/ಗ್ರಾಮೀಣ ಬ್ಯಾಂಕ್‌ಗಳು ಮಂಜೂರು ಮಾಡಿದ ಸಾಲಕ್ಕೆ ಶೇ.50ರಷ್ಟು ಅಥವಾ ಗರಿಷ್ಠ ರೂ.3.00 ಲಕ್ಷಗಳವರೆಗೆ ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡಲಾಗುವುದು.
ಬ್ಯಾಂಕ್ ಪಾಲಿನ ಸಾಲಕ್ಕೆ ಬ್ಯಾಂಕ್ ನಿಗಧಿಪಡಿಸುವ ಚಾಲ್ತಿ ದರದ ಬಡ್ಡಿಯೊಂದಿಗೆ ಸಾಲದ ಮೊತ್ತವನ್ನು ನಿಗದಿತ ಕಂತುಗಳಲ್ಲಿ ಮರು ಪಾವತಿಸಬೇಕು.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು:
ಅರ್ಜಿದಾರರು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಈ ಕೆಳಕಂಡ ಅಗತ್ಯ ದಾಖಲೆಗಳನ್ನು ಸಲ್ಲಿಸತಕ್ಕದ್ದು.
ಅರ್ಜಿದಾರರು ಹಿಂದುಳಿದ ವರ್ಗಗಳಿಗೆ ಸೇರಿರಬೇಕು ಹಾಗೂ ಸಂಬಂಧಿಸಿದ ತಾಲ್ಲೂಕು ತಹಶೀಲ್ದಾರರು/ಕಂದಾಯ ಅಧಿಕಾರಿಗಳಿಂದ ನಿಗಧಿತ ನಮೂನೆಯಲ್ಲಿ ಪಡೆದ ಜಾತಿ/ಕುಟುಂಬದ ವಾರ್ಷಿಕ ಆದಾಯ ಪ್ರಮಾಣ ಪತ್ರ. ಅರ್ಜಿದಾರರ ವಾಸದ ಪುರಾವೆಗಾಗಿ ಸಕ್ಷಮ ಪ್ರಾಧಿಕಾರಗಳು ನೀಡಿದ ಆಧಾರ ಕಾರ್ಡ್/ಚುನಾವಣಾ ಗುರುತಿನ ಚೀಟಿ/ಪಡಿತರ ಚೀಟಿ.
ಲಘು ವಾಹನ ಚಾಲನಾ ಪರವಾನಗಿಯ ದೃಢೀಕೃತ ಪ್ರತಿ.
ಅರ್ಜಿದಾರರ ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ.
ಅರ್ಜಿದಾರರು ನಿರುದ್ಯೋಗಿ ಆಗಿರಬೇಕು. (ಸ್ವಯಂ ಘೋಷಣಾ ಪತ್ರ ಸಲ್ಲಿಸುವುದು)
No comments:
Post a Comment
If You Have any Doubts, let me Comment Here