Bidar District GPSTR Counseling Selection List 2022
RECRUITMENT OF GRADUATE PRIMARY TEACHERS FOR 6-8 CLASSES - 2022 -Counselling list of Bidar district Phase-3 (Couseling wiil be held on 04.12.2023 By 3.00 PM at DDPI offices
15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ( GPSTR ) ಅಂತಿಮ ಆಯ್ಕೆ ಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿತ್ತು. ಈ ಬಳಿಕ ಕೆಲ ಜಿಲ್ಲೆಗಳಲ್ಲಿ ಕೌನ್ಸೆಲಿಂಗ್ ಮೂಲಕ ಸ್ಥಳ ಆಯ್ಕೆ ಪ್ರಕ್ರಿಯೆ ನಡೆದು, ಖಾಲಿ ಹುದ್ದೆಗಳಿಗೆ ನಿಯೋಜಿಸಲಾಗಿದೆ.
ಈಗ ಮುಂದುವರೆದು ಕಲ್ಯಾಣ ಕರ್ನಾಟಕ ಬೀದರ್ ಜಿಲ್ಲೆಯ ಅಭ್ಯರ್ಥಿಗಳ ಕೌನ್ಸಿಲಿಂಗ್ ಪ್ರಕ್ರಿಯೆ 04-12-2023ರಂದು ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಲಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, "ಪದವೀಧರ ಪ್ರಾಥಮಿಕ ಶಿಕ್ಷಕ ( Primary School Teacher ) (6 ರಿಂದ 8ನೇ ತರಗತಿ) ನೇಮಕಾತಿ-2022 ಕ್ಕೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ಬೀದರ್ 371ಜೆ ಹುದ್ದೆಗಳನ್ನು ಪ್ರಕಟಿಸಲಾಗಿದೆ. ಮಾನ್ಯ ನ್ಯಾಯಾಲಯಗಳಲ್ಲಿ ಪ್ರಕರಣಗಳಿದ್ದ ಕಾರಣದಿಂದ ತಡೆ ಹಿಡಿಯಲಾಗಿದ್ದ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಮಾನ್ಯ ಉಚ್ಚ ನ್ಯಾಯಾಲಯದ ರಿಟ್ ಅರ್ಜಿ ಸಂ.23162/2023, 23450/2023 ರಲ್ಲಿನ ದಿನಾಂಕ: 30/10/2023ರ ಆದೇಶ ಮತ್ತು ಇಡೀ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಈಗಾಗಲೇ ರಿಟ್ ಅಪೀಲು ಸಂಖ್ಯೆ: 305/2023 ರಲ್ಲಿನ ದಿನಾಂಕ: 12/10/2023ರ ಆದೇಶದ ತೀರ್ಪಿನ ಹಿನ್ನೆಲೆಯಲ್ಲಿ ನ್ಯಾಯಾಲಯಗಳ ಆದೇಶದಿಂದ ಪ್ರಭಾವಿತವಾಗಬಹುದಾದ ಹುದ್ದೆಗಳನ್ನು ಕಾಯ್ದಿರಿಸಿ ಉಳಿದ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್‌ನ್ನು ಮುಂದುವರೆಸಲಾಗಿದೆ ಎಂದು ಹೇಳಿದೆ.
ಈ ಬಗ್ಗೆ ಸದರಿ 371 ಜೆ ಹುದ್ದೆಗಳಿರುವ (ಶೇಕಡ 80 ರ ಸ್ಥಳೀಯ ವೃಂದ, ಶೇಕಡ 20ರ ಮಿಕ್ಕುಳಿದ ವೃಂದ ಮತ್ತು ಶೇಕಡ 8ರ ರಾಜ್ಯ ಮಟ್ಟದ ಸ್ಥಳೀಯ ವೃಂದದ ಹುದ್ದೆಗಳು) 08/03/2023 ರಂದು ಪ್ರಕಟಿತ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಿಲಿಂಗ್‌ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ದಿನಾಂಕ: 03/12/2023 ರಂದು ಶಾಲಾ ಶಿಕ್ಷಣ ಇಲಾಖೆಯ ವೆಬ್ ಸೈಟ್ schooleducation.karnataka.gov.in ನಲ್ಲಿ ಪ್ರಕಟವಾಗಿವೆ.
ಸದರಿ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಕ್ರಮವಾಗಿ ಗಣಿತ ಮತ್ತು ವಿಜ್ಞಾನ, ಸಮಾಜ ವಿಜ್ಞಾನ, ಜೀವ ವಿಜ್ಞಾನ ಮತ್ತು ಆಂಗ್ಲಭಾಷಾ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸಿಲಿಂಗ್‌ನ್ನು ದಿನಾಂಕ: 04/12/2023 ರಿಂದ ಮದ್ಯಾಹ್ನ 3 ಗಂಟೆಗೆ ಜಿಲ್ಲಾ ನೇಮಕಾತಿ ಪ್ರಾಧಿಕಾರಿಯವರಾದ ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರ ಕಛೇರಿಯಲ್ಲಿ ನಡೆಸಲಾಗಿದೆ. ಆದ್ದರಿಂದ ಅಭ್ಯರ್ಥಿಗಳು ಇಲಾಖಾ ವೆಬ್ ಸೈಟ್‌ನಲ್ಲಿರುವಂತೆ ಎಲ್ಲಾ ಅಗತ್ಯ ವಿವರಗಳನ್ನು ಪಡೆದುಕೊಂಡು ಸಕಾಲದಲ್ಲಿ ಕೌನ್ಸಿಲಿಂಗ್ ಸ್ಥಳದಲ್ಲಿ ಭಾವ ಚಿತ್ರವಿರುವ ಗುರುತಿನ ಚೀಟಿ ಮತ್ತು ನೇಮಕಾತಿಗೆ ಸಂಬಂಧಪಟ್ಟಂತೆ ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಾಗಿದ್ದಾರೆ.
ಹೆಚ್ಚಿನ ವಿವರಗಳಿಗೆ ಸಂರ್ಪಕಿಸುವಂತೆ ಹೇಳಿದೆ.
No comments:
Post a Comment
If You Have any Doubts, let me Comment Here