Cabinet Sub-Committee on Covid Control
ರಾಜ್ಯದಲ್ಲಿ ಕೋವಿಡ್ ಸೋಂಕಿನ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಂಪುಟ ಉಪಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಾಲ್ವರು ಸಚಿವರನ್ನು ಒಳಗೊಂಡ ಸಂಪುಟ ಉಪಸಮಿತಿಯನ್ನು ರಾಜ್ಯ ಸರ್ಕಾರ ರಚನೆ ಮಾಡಿದೆ. ಸಚಿವ ದಿನೇಶ್ ಗುಂಡೂರಾವ್ ಅವರನ್ನು ಕಮಿಟಿ ಅಧ್ಯಕ್ಷರನ್ನಾಗಿ ಮಾಡಲಾಗಿದ್ದು, ಉಪ ಸಮಿತಿಯಲ್ಲಿ ಸಚಿವ ಹೆಚ್ ಸಿ ಮಹಾದೇವಪ್ಪ, ಸಚಿವ ಶರಣ ಪ್ರಕಾಶ್ ಪಾಟೀಲ್, ಎಂ.ಸಿ ಸುಧಾಕರ್ ಇದ್ದಾರೆ.ಕೋವಿಡ್ ಸೇರಿ ಸಾಂಕ್ರಾಮಿಕ ರೋಗಗಳ ಕುರಿತು ಪರಾಮರ್ಶಿಸಲು ಸರ್ಕಾರ ಸಮಿತಿ ರಚನೆ ಮಾಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಸಕಲ ಸಿದ್ದತೆ ಕೈಗೊಂಡಿದೆ. ಇದೀಗ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಂಪುಟ ಉಪಸಮಿತಿ ರಚನೆ ಮಾಡಿದೆ.
No comments:
Post a Comment
If You Have any Doubts, let me Comment Here