Categorywise ZP and TP Seats Fixation Gazette 2023
ರಾಜ್ಯ ಸರ್ಕಾರವು ಕೊಡಗು ಜಿಲ್ಲೆ ಹೊರತುಪಡಿಸಿ 30 ಜಿಲ್ಲೆಗಳ ಜಿಪಂ ಮತ್ತು 234 ತಾಲ್ಲೂಕು ಪಂಚಾಯಿತಿಗಳ ಸದಸ್ಯರ ಸಂಖ್ಯೆ, ವರ್ಗವಾರು ಮೀಸಲು ಸಂಖ್ಯೆ, ಕ್ಷೇತ್ರಗಳ ಗಡಿ ನಿಗದಿಪಡಿಸಿ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ.
30 ಜಿಲ್ಲಾ ಪಂಚಾಯಿತಿಗಳಲ್ಲಿ 1101 ಸದಸ್ಯರಿದ್ದಾರೆ. 234 ತಾಲ್ಲೂಕು ಪಂಚಾಯಿತಿಗಳಲ್ಲಿ 3621 ಸದಸ್ಯರಿದ್ದಾರೆ. ಕಳೆದ ಸಪ್ಟೆಂಬರ್ ನಲ್ಲಿ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪಂಚಾಯತಿಗಳ ಗಡಿಯ ವ್ಯಾಪ್ತಿ, ಸದಸ್ಯರ ಸಂಖ್ಯೆ ನಿಗದಿಪಡಿಸಿ ಕರಡು ಅಧಿಸೂಚನೆ ಹೊರಡಿಸಿ ಸಾರ್ವಜನಿಕರಿಂದ ಆಕ್ಷೇಪಣೆ, ಸಲಹೆ, ಸೂಚನೆ ಆಹ್ವಾನಿಸಿತ್ತು.
ಜಿಲ್ಲಾವಾರು ಆಕ್ಷೇಪಣೆ ಆಹ್ವಾನಿಸಿ ಸದಸ್ಯರ ಸಂಖ್ಯೆಯನ್ನು ನಿರ್ಧರಿಸಿ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಈಗ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ. ಮಹಿಳೆಯರಿಗೆ ಶೇಕಡ 50ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಇನ್ನು ತಿಂಗಳೊಳಗೆ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ಹೈಕೋರ್ಟ್ ಗೆ ಸರ್ಕಾರ ಭರವಸೆ ನೀಡಿದೆ.
No comments:
Post a Comment
If You Have any Doubts, let me Comment Here