21-12-2023 Thursday Covid-19 Media Helath Bulletin of Karnataka
ದೇಶದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳ ( Corona Case ) ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಕಳೆದ 24 ಗಂಟೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಹೊಸದಾಗಿ 24 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಸಕ್ರೀಯ ಪ್ರಕರಣಳ ಸಂಖ್ಯೆ 105ಕ್ಕೆ ಏರಿಕೆಯಾಗಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ( Karnataka Health Department ) ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು ಕಳೆದ 24 ಗಂಟೆಯಲ್ಲಿ ಆರ್ ಟಿ ಪಿಸಿ ಆರ್ ಮೂಲಕ 1791 ಮಂದಿಯನ್ನು ಹಾಗೂ ರ್ಯಾಟ್ ಮೂಲಕ 427 ಮಂದಿ ಸೇರಿದಂತೆ 2,263 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದೆ.
ಹೀಗೆ ಕೋವಿಡ್ ಪರೀಕ್ಷೆಗೆ ಒಳಪಟ್ಟಂತ 2,263 ಜನರಲ್ಲಿ 24 ಜನರಿಗೆ ಕೊರೋನಾ ಸೋಂಕು ( Corona Case ) ದೃಢಪಟ್ಟಿದೆ. ಸೋಂಕಿತರಾಗಿದ್ದಂತ 11 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಈಗ ಸಕ್ರೀಯ ಕೋವಿಡ್ ಸೋಂಕಿತರ ಸಂಖ್ಯೆ 105 ಮಂದಿ ಇದ್ದಾರೆ ಅಂತ ಹೇಳಿದೆ.
ಅಂದಹಾಗೇ ಇದು ಬೆಂಗಳೂರು ನಗರದಲ್ಲಿ 23 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರಿಗೆ ಸೇರಿದಂತೆ 24 ಮಂದಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ.
No comments:
Post a Comment
If You Have any Doubts, let me Comment Here