Covid-19 Media Helath Bulletin of Karnataka 24-12-2023
ಕರ್ನಾಟಕ ರಾಜ್ಯದಲ್ಲಿ ಇಂದು ಕೊರೋನಾ ಕೇಕೆ ಹಾಕಿದೆ. ದಾಖಲೆಯ 106 ಮಂದಿಗೆ ಕೋವಿಡ್ ಪಾಸಿಟಿವ್ ( Covid19 Positive ) ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 344ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿಸಿಆರ್ ಮೂಲಕ 1,135, ರ್ಯಾಟ್ ಮೂಲಕ 306 ಸೇರಿದಂತೆ 1,441 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದೆ.
ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 95, ಚಾಮರಾಜನಗರ ಜಿಲ್ಲೆಯಲ್ಲಿ ಒಬ್ಬರಿಗೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರಿಗೆ, ಮಂಡ್ಯ 01, ಶಿವಮೊಗ್ಗ 01 ಸೇರಿದಂತೆ 106 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸಕ್ರೀಯ ಸೋಂಕಿತರ ಸಂಖ್ಯೆ 344ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.
ಇಂದು ಸೋಂಕಿತರಾದಂತ 33 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿತರಾದಂತ 344 ಮಂದಿಯಲ್ಲಿ 323 ಜನರನ್ನು ಹೋಂ ಐಸೋಲೇಷನ್ ನಲ್ಲಿ ಇರಿಸಲಾಗಿದೆ. 21 ಮಂದಿಯನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 7 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐಸೋಲೇಷನ್ ಆಸ್ಪತ್ರೆಯಲ್ಲಿ 14 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದೆ.
No comments:
Post a Comment
If You Have any Doubts, let me Comment Here