Covid-19 Media Helath Bulletin of Karnataka 29-12-2023
ರಾಜ್ಯದಲ್ಲಿ ಶುಕ್ರವಾರ 173 ಹೊಸ ಕೋವಿಡ್ -19 ಸೋಂಕು ಪ್ರಕರಣಗಳು ದಾಖಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಎರಡು ಕೊರೋನವೈರಸ್ ಸಂಬಂಧಿತ ಸಾವುಗಳು ವರದಿಯಾಗಿವೆ. ಬೆಂಗಳೂರು: ಕರ್ನಾಟಕದಲ್ಲಿ ಶುಕ್ರವಾರ 173 ಹೊಸ ಕೋವಿಡ್ -19 ಸೋಂಕು ಪ್ರಕರಣಗಳು ದಾಖಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಎರಡು ಕೊರೋನವೈರಸ್ ಸಂಬಂಧಿತ ಸಾವುಗಳು ವರದಿಯಾಗಿವೆ.
ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಶುಕ್ರವಾರ 173 ಹೊಸ ಕೋವಿಡ್ -19 ಸೋಂಕು ಪ್ರಕರಣಗಳ ದಾಖಲಾತಿಯೊಂದಿಗೆ ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 702ಕ್ಕೆ ಏರಿದೆ. ಈ ಪೈಕಿ 649 ಜನರು ಮನೆಯಲ್ಲಿ ಪ್ರತ್ಯೇಕವಾಗಿರುತ್ತಾರೆ ಮತ್ತು ಉಳಿದ 53 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಂತೆಯೇ ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ರಾಜ್ಯದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 10ಕ್ಕೇರಿದೆ. ಮೃತರು ಕ್ರಮವಾಗಿ 59 ಮತ್ತು 69 ವರ್ಷ ವಯಸ್ಸಿನವರಾಗಿದ್ದಾರೆ, ಇಬ್ಬರೂ ಬೆಂಗಳೂರು ನಗರ ಜಿಲ್ಲೆಯಲ್ಲಿ ದಾಖಲಾಗಿದ್ದಾರೆ.
ಇಬ್ಬರಿಗೂ ಜ್ವರ ಮತ್ತು ಕೆಮ್ಮಿನ ಲಕ್ಷಣಗಳಿತ್ತು ಎಂದು ಹೇಳಲಾಗಿದೆ. COVID-19: ಕಳೆದ 24 ಗಂಟೆಗಳಲ್ಲಿ 797 ಮಂದಿಗೆ ಕೋವಿಡ್ ಪಾಸಿಟಿವ್, ಸಕ್ರಿಯ ಪ್ರಕರಣಗಳ ಸಂಖ್ಯೆ 4,091ಕ್ಕೆ ಏರಿಕೆ ಕಳೆದ 24 ಗಂಟೆಗಳಲ್ಲಿ 37 ಸೋಂಕಿತರು ಚೇತರಿಸಿಕೊಂಡಿದ್ದು, ಒಟ್ಟು 8,349 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ 6,400 RTPCR ಮತ್ತು 1,949 ರಾಪಿಡ್ ಆಂಟಿಜೆನ್ ಪರೀಕ್ಷೆಗಳನ್ನು ನಡೆಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಸಂಖ್ಯೆಯ ಪರೀಕ್ಷೆಗಳನ್ನು ನಡೆಸಲಾಗಿದೆ.
ನಡೆಸಿದ 2,616 ಪರೀಕ್ಷೆಗಳಲ್ಲಿ, 82 ಪಾಸಿಟಿವ್ ಬಂದಿದ್ದು, ಇದು ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಅತಿ ಹೆಚ್ಚಿನದ್ದಾಗಿದೆ. ರಾಜ್ಯದಲ್ಲಿ ಸೋಂಕು ಸಕಾರಾತ್ಮಕತೆಯ ಪ್ರಮಾಣವು 2.07 ಪ್ರತಿಶತದಷ್ಟಿದ್ದರೆ, ಪ್ರಕರಣದ ಸಾವಿನ ಪ್ರಮಾಣವು 1.15 ಪ್ರತಿಶತದಷ್ಟಿದೆ ಎಂದು ಆರೋಗ್ಯ ಇಲಾಖೆಯ ದತ್ತಾಂಶಗಳು ಮಾಹಿತಿ ನೀಡಿವೆ.
No comments:
Post a Comment
If You Have any Doubts, let me Comment Here