Good news for those who have applied for the new ``APL-BPL'' ration card
ಹೊಸ ಎಪಿಎಲ್, ಬಿಪಿಎಲ್ ಸೇರಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಶುಭ ಸುದ್ದಿ ನೀಡಿದ್ದು, 15 ದಿನದೊಳಗೆ ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಮಾನ್ಯ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವರು ಸೂಚನೆ ನೀಡಿದ್ದಾರೆ.
ಈ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಮಾಹಿತಿ ನೀಡಿದ್ದು, ಚುನಾವಣೆ ಅಂಗವಾಗಿ ಹೊಸ ಪಡಿತರ ಚೀಟಿ ವಿತರಣೆ ನಿಲ್ಲಿಸಲಾಗಿತ್ತು.
ಇನ್ನು 15 ದಿನದೊಳಗೆ ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಡಿತರ ಚೀಟಿದಾರರಿಗೆ ಹಣದ ಬದಲು ಅಕ್ಕಿ ನೀಡಲು ಪ್ರಯತ್ನ ನಡೆಸಲಾಗುತ್ತಿದ್ದು, ಶೀಘ್ರವೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಆರು ತಿಂಗಳಿನಿಂದ ರೇಷನ್ ಪಡೆಯದ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುವ ಕುರಿತಂತೆ ಆಹಾರ ಇಲಾಖೆ ಚಿಂತನೆ ನಡೆಸಿದ್ದು, ಈ ಪೈಕಿ ಒಟ್ಟು 3.26 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಮುಂದಾಗಿದೆ. ರಾಜ್ಯಾದ್ಯಂತ 3.26 ಲಕ್ಷ ಬಿಪಿಎಲ್ ಕಾರ್ಡ್ದಾರರು ಆರು ತಿಂಗಳಿಂದ ರೇಷನ್ ಪಡೆಯುತ್ತಿಲ್ಲ ಎಂದು ಇಲಾಖೆ ಹೇಳಿದೆ.ಇಂತಹ ಕಾರ್ಡ್‌ಗಳ ರದ್ದತಿಗೆ ಸರ್ಕಾರ ಸೂಚನೆ ಕೊಟ್ಟಿದೆ.
No comments:
Post a Comment
If You Have any Doubts, let me Comment Here