JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Sunday, December 17, 2023

Government orders free electricity and water supply to all schools and colleges in the state

  Jnyanabhandar       Sunday, December 17, 2023
Government orders free electricity and water supply to all schools and colleges in the state.

ರಾಜ್ಯದ ಎಲ್ಲಾ ಸರ್ಕಾರಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ಉಚಿತ ನೀರಿನ ವ್ಯವಸ್ಥೆ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶಾಲೆಗಳು ಶಿಕ್ಷಣಕ್ಕೆ ಪ್ರಥಮ ವೇದಿಕೆಯಾಗಿದ್ದು, ರಾಜ್ಯದ ಬಡ, ಮಧ್ಯಮ ವರ್ಗದ ಕುಟುಂಬಗಳ ಮಕ್ಕಳು ವಿದ್ಯಾಭ್ಯಾಸ ಪಡೆಯಲು ಸರ್ಕಾರಿ ಶಾಲೆಗಳು ಪ್ರಮುಖ ಪಾತ್ರವಹಿಸುತ್ತಿದ್ದು, ಸರ್ಕಾರಿ ಶಾಲೆಗಳ ಉನ್ನತೀಕರಣ ಹಾಗೂ ಅವುಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು 'ಗೃಹ ಜ್ಯೋತಿ' ಯೋಜನೆಯಡಿ ವಿದ್ಯುಚ್ಛಕ್ತಿಯನ್ನು ಉಚಿತವಾಗಿ ಒದಗಿಸುತ್ತಿರುವ ರೀತಿಯಲ್ಲಿಯೇ, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೂ ಸಹ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯ ಒದಗಿಸುವುದರಿಂದ, ಸರ್ಕಾರಿ ಶಾಲೆಗಳಲ್ಲಿ ಉಳಿಕೆಯಾಗುವ ನಿರ್ವಹಣಾ ಅನುದಾನದಿಂದ ಶಾಲೆಗಳ ಗುಣಮಟ್ಟ ಅಭಿವೃದ್ಧಿಪಡಿಸಿ ಮಕ್ಕಳದಾಖಲಾತಿಯನ್ನುಹೆಚ್ಚಿಸಬಹುದಾಗಿರುವುದರಿಂದ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಬಾಕಿಯಿರುವ ವಿದ್ಯುತ್ ಮತ್ತು ನೀರಿನ ಬಿಲ್ಲುಗಳನ್ನು ಪಾವತಿ ಮಾಡುವುದರಿಂದ ವಿನಾಯಿತಿ ನೀಡುವಂತೆ ಹಾಗೂ ಉಚಿತವಾಗಿ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು, ಇವರು ಕೋರಿರುತ್ತಾರೆ. 

ಈ ಹಿನ್ನೆಲೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನಕ್ಕೆ ಒಳಪಡುವ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ಆರ್ಥಿಕ ಇಲಾಖೆಯು ಸಹಮತಿ ನೀಡಿರುತ್ತದೆ.ಮೇಲ್ಕಂಡ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ. ಈ ಕೆಳಕಂಡಂತೆ ಸರ್ಕಾರ ಆದೇಶಿಸಿದೆ.
2023-24ನೇ ಆರ್ಥಿಕ ಸಾಲಿನ ಅಂತ್ಯದವರೆಗೆ, ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಬಳಕೆ ಮಾಡಲಾದ/ಮಾಡಲಾಗುವ ವಿದ್ಯುತ್ ಮತ್ತು ನೀರಿನ ಶುಲ್ಕ ಪಾವತಿಗಾಗಿ ಅಗತ್ಯವಿರುವ ಜಿಲ್ಲಾವಾರು ಅನುದಾನದ ವಿವರವಾದ ಪ್ರಸ್ತಾವನೆಯನ್ನು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಹಾಗೂ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು, ಇವರು ಕೂಡಲೇ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.

2024-25ನೇ ಸಾಲಿನಿಂದ ನಿರಂತರವಾಗಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್ ಮತ್ತು ನೀರು ಸರಬರಾಜು ಮಾಡಲು ವಾರ್ಷಿಕವಾಗಿ ಅಗತ್ಯವಿರುವ ಅನುದಾನದ ಪ್ರಸ್ತಾವನೆಯನ್ನು ಇಂಧನ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆಗಳು ನೇರವಾಗಿ ಆರ್ಥಿಕ ಇಲಾಖೆಗೆ ಸಲ್ಲಿಸಿ ಅಗತ್ಯವಿರುವ ಅನುದಾನವನ್ನು ಪಡೆಯಲು ಸೂಕ್ತ ಕ್ರಮ ಕೈಗೊಳ್ಳತಕ್ಕದ್ದು.

ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ/ಬೋಧಕೇತರ ಸಿಬ್ಬಂದಿಗಳು ಹಾಗು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಉಚಿತವಾಗಿ ಒದಗಿಸಲಾಗುವ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಬಳಕೆ ಮಾಡುವಂತೆ ಹಾಗೂ ಸಾಧ್ಯವಾದಷ್ಟು ಮಿತವ್ಯಯ ಸಾಧಿಸಲು ಅಗತ್ಯ ಕ್ರಮವಹಿಸತಕ್ಕದ್ದು ಎಂದು ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

logoblog

Thanks for reading Government orders free electricity and water supply to all schools and colleges in the state

Previous
« Prev Post

No comments:

Post a Comment

If You Have any Doubts, let me Comment Here