Gruha Lakshmi Scheme Camp
ಮಹಿಳೆಯರಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಯ ಸಮಸ್ಯೆ ನಿವಾರಿಸಲು ಸರ್ಕಾರ ಬಿಗ್ ಪ್ಲ್ಯಾನ್ ಮಾಡಿದ್ದು, ಡಿ.27 ರ ನಾಳೆಯಿಂದ ಡಿ.29 ರವರೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್ ನಡೆಸಲು ಸಿದ್ಧತೆ ನಡೆಸಿದೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಯಾರ ಖಾತೆಗೆ ಹಣ ಬಂದಿಲ್ಲ ಅವರಿಗೆ ರಾಜ್ಯ ಸರ್ಕಾರವೇ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಗೆ ಪರಿಹಾರ ನೀಡಲಿದೆ.
ಪ್ರತಿ ಗ್ರಾಮ ಪಂಚಾಯತ್ ನಲ್ಲಿ ಡಿ.27 ರಿಂದ ಡಿ. 29 ರವರೆಗೆ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಕ್ಯಾಂಪ್ ಆಯೋಜಿಸುವಂತೆ ಸೂಚನೆ ನೀಡಲಾಗಿದೆ. ಪಿಡಿಒಗಳ ನೇತೃತ್ವದಲ್ಲಿ ಕ್ಯಾಂಪ್ ಆಯೋಜನೆಯಾಗಲಿದ್ದು, ಈ ಕ್ಯಾಂಪ್ ನಲ್ಲಿ ಫಲಾನುಭವಿಗಳ ಸಮಸ್ಯೆ ಸರಿಪಡಿಸಲಾಗುತ್ತದೆ.ಪ್ರತಿ ಗ್ರಾಮ ಪಂಚಾಯತ್ ನಲ್ಲಿ ಕ್ಯಾಂಪ್ ನಡೆಯಲಿದ್ದು, ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ಗಳು, ಅಂಗನವಾಡಿ ಕಾರ್ಯಕರ್ತರು ಭಾಗಿಯಾಗುವಂತೆ ಸೂಚಿಸಲಾಗಿದೆ.
1. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸತಕ್ಕದ್ದು.
2. ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಸಂಬಂಧಿಸಿದ ಸಮಸ್ಯೆಗಳನ್ನು ಈ ಕ್ಯಾಂಪ್‌ಗಳಲ್ಲಿ ಪರಿಹರಿಸತಕ್ಕದ್ದು.
3. ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಗಣಕ ಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು ಮತ್ತು Electronic Delivery of Citizen Services (EDCS) ತಂಡಗಳು ಈ ಕ್ಯಾಂಪ್‌ಗಳಲ್ಲಿ ಭಾಗವಹಿಸತಕ್ಕದ್ದು.
4. ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನ ಪ್ರತಿನಿಧಿಗಳು ಮತ್ತು ಇತರೆ ಬ್ಯಾಂಕ್‌ಗಳ ಪ್ರತಿನಿಧಿಗಳು ಈ ಕ್ಯಾಂಪ್‌ಗಳಲ್ಲಿ ಭಾಗವಹಿಸತಕ್ಕದ್ದು.
5. ಕ್ಯಾಂಪ್‌ಗಳಲ್ಲಿ ಫಲಾನುಭವಿಗಳಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸತಕ್ಕದ್ದು.
•ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದು.
ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ ಮಾಡುವುದು.
ಇ-ಕೆವೈಸಿ ಅಪ್‌ಡೇಟ್ ಮಾಡುವುದು.
ಗೃಹಲಕ್ಷ್ಮೀ ಅರ್ಜಿಯ ಸ್ಥಿತಿ ಪರಿಶೀಲಿಸುವುದು.
ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನು ಪರಿಹರಿಸುವುದು.
6. ಕ್ಯಾಂಪ್‌ಗಳನ್ನು ಆಯೋಜಿಸುವ ಕುರಿತು ದಿನಾಂಕ:22.12.2023 ರಂದು ಕ್ಯಾಂಪ್ ಆಯೋಜಿಸುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ಆಯೋಜಿಸುವುದು.
7. ಪ್ರತಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ದಿನಾಂಕ:27.12.2023 ರಿಂದ 29.12.2023 ರವರೆಗೆ ಪ್ರತಿದಿನ ಬೆಳಿಗ್ಗೆ 9.00 ರಿಂದ ಸಂಜೆ 5.00 ಗಂಟೆಯವರೆಗೆ ಕ್ಯಾಂಪ್‌ಗಳನ್ನು ಆಯೋಜಿಸುವುದು.
8. ಕ್ಯಾಂಪ್ ಆಯೋಜಿಸುವ ಕುರಿತು ಫಲಾನುಭವಿಗಳಿಗೆ EDCS ರವರು SMS ಮೂಲಕ ಮಾಹಿತಿ ನೀಡುವುದು.
9. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕ್ಷೇತ್ರಮಟ್ಟದ ಸಿಬ್ಬಂದಿಗಳು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮಾಹಿತಿ ನೀಡಿ, ಅವರನ್ನು ಕ್ಯಾಂಪ್‌ಗಳಿಗೆ ಕರೆತರುವ ಜವಾಬ್ದಾರಿ ನಿರ್ವಹಿಸುವುದು.
10. ಕ್ಯಾಂಪ್ ಆಯೋಜಿಸುವ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪತ್ರಿಕೆ ಮತ್ತು ಇತರೆ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ನೀಡತಕ್ಕದ್ದು. ಮೇಲೆ ತಿಳಿಸಿದಂತೆ, ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಕ್ಯಾಂಪ್‌ಗಳನ್ನು ಆಯೋಜಿಸಿ ಯಶಸ್ವಿಗೊಳಿಸಲು ಸೂಚಿಸಿದೆ.
ಗೃಹ ಲಕ್ಷ್ಮೀ ಯೋಜನೆಗೆ ಪ್ರಮುಖವಾಗಿ ತರಬೇಕಾದ ದಾಖಲೆಗಳು
▪️ತಮ್ಮ ಆಧಾರ್ ಕಾರ್ಡ್
▪️ಪತಿಯ ಆಧಾರ್ ಕಾರ್ಡ್
▪️ಪಡಿತರ ಚೀಟಿ
▪️ಬ್ಯಾಂಕ್ ಪಾಸ್ ಪುಸ್ತಕ
No comments:
Post a Comment
If You Have any Doubts, let me Comment Here