IAS Officers Transfer Order dated 20-12-2023
ಕರ್ನಾಟಕ ರಾಜ್ಯ ಸರ್ಕಾರ ಮತ್ತೆ 3 ಜನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವಿವಿಧ ಇಲಾಖೆಗಳ ನಿರ್ದೇಶಕರು, ಸರ್ಕಾರದ ಕಾರ್ಯದರ್ಶಿಗಳನ್ನು ವರ್ಗಾವಣೆಗೊಳಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.
ದಿನಾಂಕ 20-12-2023 ಬುಧವಾರದಂದು ಕರ್ನಾಟಕ ಸರ್ಕಾರ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
ಶ್ರೀಕರ್ ಎಂ. ಎಸ್., ಕನಗವಲ್ಲಿ ಎಂ. ಮತ್ತು ವಸಿರೆಡ್ಡಿ ವಿಜಯ ಜ್ಯೋತ್ಸ್ನಾ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.
ಶ್ರೀಕರ್ ಎಂ. ಎಸ್. (ಕೆಎನ್ 1999). ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಡಳಿತ ಸುಧಾರಣೆ), ಬೆಂಗಳೂರು ಸರ್ಕಾರದ ಕಾರ್ಯದರ್ಶಿಯಾಗಿದ್ದ ಶ್ರೀಕರ್ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದ ತನಕ ನೇಮಕ ಮಾಡಲಾಗಿದೆ. ಈ ಹುದ್ದೆಯನ್ನು ಹೆಚ್ಚುವರಿಯಾಗಿ ನೋಡಿಕೊಳ್ಳುತ್ತಿದ್ದ ಉಮಾಶಂಕರ್ ಎಸ್. ಆರ್. ಬಿಡುಗಡೆಗೊಳಿಸಲಾಗಿದೆ.
ಕನಗವಲ್ಲಿ ಎಂ. (ಕೆಎನ್: 2010). ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ನಿರ್ದೇಶಕರಾಗಿದ್ದ ಕನಗವಲ್ಲಿ ಅವರನ್ನು ವ್ಯವಸ್ಥಾಪಕ ನಿರ್ದೇಶಕರು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರು ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ ಶ್ರೀವಿದ್ಯಾ ಪಿ. ಐ. ಅವರನ್ನು ಬಿಡುಗಡೆಗೊಳಿಸಲಾಗಿದೆ.
ವಸಿರೆಡ್ಡಿ ವಿಜಯ ಜ್ಯೋತ್ಸ್ನಾ (ಕೆಎನ್: 2010). ಹುದ್ದೆಯ ನಿರೀಕ್ಷೆಯಲ್ಲಿದ್ದರು. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಈ ಸ್ಥಾನದಲ್ಲಿದ್ದ ಕನಗವಲ್ಲಿ ಎಂ. ಅವರನ್ನು ವರ್ಗಾವಣೆ ಮಾಡಲಾಗಿದೆ.
No comments:
Post a Comment
If You Have any Doubts, let me Comment Here