Karnataka Government Covid-19 Guidelines
ಆರೋಗ್ಯ ಸೌಧದಲ್ಲಿ ಇಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕರ್ನಾಟಕವೂ ಸೇರಿದಂತೆ, ದೇಶದ ಇತರ ರಾಜ್ಯಗಳಲ್ಲಿ ವರದಿಯಾಗುತ್ತಿರುವ ಕೋವಿಡ್ 19, ಓಮಿಕ್ರಾನ್ ನ ಉಪತಳಿಯಾದ JN.1 ನ 34 ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿರುವ ಹಿನ್ನೆಲೆಯಲ್ಲಿ, ಪಾಲಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಅಗತ್ಯ ಮಾರ್ಗಸೂಚಿಗಳು, ಸುತ್ತೋಲೆಗಳು ಹಾಗೂ ಸಲಹಾ ಪತ್ರವನ್ನು ಹೊರಡಿಸಲಾಗಿದೆ. ಲಭ್ಯವಿರುವ ಮಾಹಿತಿಯ ಅನ್ವಯ, JN.1 ಉಪತಳಿಯು ಹೆಚ್ಚು ಹರಡುವಿಕೆಯ (High Transmissibility) ಸಾಮರ್ಥ್ಯವನ್ನು ಹೊಂದಿದೆ. ಪರಿಣಾಮವಾಗಿ ವೃದ್ಧರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರವವರು ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಗಳು ಹೆಚ್ಚಿವೆ ಎಂದರು.
ಪ್ರಸ್ತುತ ರಾಜ್ಯದಲ್ಲಿ, ದಿನಾಂಕ: 26.12.2023ರ ವರೆಗೆ 464 ಸಕ್ರಿಯ ಕೋವಿಡ್ ಪ್ರಕರಣಗಳ ಪೈಕಿ 376 ಪ್ರಕರಣಗಳು ಬೆಂಗಳೂರು ನಗರದಲ್ಲಿ ವರದಿಯಾಗಿವೆ. ಹಾಗೂ ಒಟ್ಟು 74 ಖಚಿತ ಕೋವಿಡ್ ಪ್ರಕರಣಗಳಲ್ಲಿ 57 ಪ್ರಕರಣಗಳು ಮತ್ತು 9 ಮರಣ ಪ್ರಕರಣಗಳಲ್ಲಿ 4 ಮರಣ ಪ್ರಕರಣಗಳು, ಬೆಂಗಳೂರು ನಗರಕ್ಕೆ ಸೇರಿವೆ. ರಾಜ್ಯದಲ್ಲಿ ಈವರೆಗೆ ವರದಿಯಾಗಿರುವ 34 JN.1 ಪ್ರಕರಣಗಳ ಪೈಕಿ 21 JN.1 ಪ್ರಕರಣಗಳು ಬೆಂಗಳೂರು ನಗರದ್ದಾಗಿದೆ ಎಂದು ತಿಳಿಸಿದ್ದಾರೆ.
ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ, ಮುಂಬರುವ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಜನಸಂದಣಿ ಪ್ರದೇಶಗಳನ್ನು ಹಾಗೂ ಒಳಾಂಗಣ ಪ್ರದೇಶಗಳಲ್ಲಿ ಜನಸಂದಣಿಯಾಗುವುದನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ಸಾರ್ವಜನಿಕರು ಮುಂಜಾಗೃತಾ ಕ್ರಮವಾಗಿ Covid Appropriate Behaviour (CAB) ಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಹ್ಯಾಂಡ್ ಸ್ಯಾನಿಟೈಸರ್ ಬಳಸುವುದರ ಬಗ್ಗೆ ಅರಿವು ಮೂಡಿಸುವುದು ಎಂದು ಸೂಚನೆ ನೀಡಿದ್ದಾರೆ.
ಕೊರೊನಾ ಪಾಸಿಟಿವ್ ಬಂದ ಉದ್ಯೋಗಿಗಳಿಗೆ ಏಳು ದಿನ ವೇತನ ಸಹಿತ ರಜೆ, ನೆಗಡಿ ಜ್ವರವಿರುವ ಮಕ್ಕಳಿಗೆ ಶಾಲೆಗೆ ರಜೆ ನೀಡಲಾಗುವುದು ಎಂದು ಹೇಳಿದ್ದಾರೆ.
ಮುಂದುವರೆದು, ಈಗಾಗಲೇ ಸಾರ್ವಜನಿಕರಿಗೆ ಸಲಹಾ ಪತ್ರದಲ್ಲಿ ತಿಳಿಸಿರುವಂತೆ, 60 ವರ್ಷ ಮೇಲ್ಪಟ್ಟವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರವವರು ಮಾಸ್ಕ್ ಧರಿಸುವುದನ್ನು ಪುನರುಚ್ಛರಿಸಲಾಗಿದೆ.
No comments:
Post a Comment
If You Have any Doubts, let me Comment Here