Karnataka Second PUC Preparatory Exam Time Table 2024
ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ( Karnataka 2nd PUC Preparatory Exam ) ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ಜನವರಿ 16ರಿಂದ ಪೂರ್ವ ಸಿದ್ಧತಾ ಪರೀಕ್ಷೆ ಆರಂಭಗೊಳ್ಳಲಿದೆ.
ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು, ಪ್ರತಿ ವರ್ಷವೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ( Karnataka Second PUC Preparatory Exam ) ಪೂರ್ವಭಾವಿಯಾಗಿ ಜಿಲ್ಲಾ ಹಂತದಲ್ಲಿ ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಲಾಗುತ್ತಿದೆ. 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಅನ್ನು ದಿನಾಂಕ 02-03-2024 ರಿಂದ 22-03-2024ರವರೆಗೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ ಎಂದಿದೆ.
ಇದಕ್ಕೂ ಮುಂಚಿತವಾಗಿ ಆಯಾ ಜಿಲ್ಲೆಗಳ ಉಪನಿರ್ದೇಶಕರು ಜಿಲ್ಲಾ ಮಟ್ಟದಲ್ಲಿ ವೇಳಾಪಟ್ಟಿ ಹಾಗೂ ಮಂಡಳಿಯ ನಿರ್ದೇಶನದಂತೆ ಪ್ರಾಯೋಗಿಕ ಪರೀಕ್ಷೆ ಹೊಂದಿರುವ ವಿಷಯಗಳಲ್ಲಿ 70 ಅಂಕಗಳು ಹಾಗೂ ಪ್ರಾಯೋಗಿಕ ಪರೀಕ್ಷೆ ಹೊಂದಿರದ ವಿಷಯಗಳಲ್ಲಿ 80 ಅಂಕಗಳಿಗೆ ಪ್ರಶ್ನೆಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಅಪ್ ಲೋಡ್ ಮಾಡಿರುವಂತ ಮಾದರಿ ಪ್ರಶ್ನೆ ಪತ್ರಿಕೆ ಹಾಗೂ ನೀಲನಕ್ಷೆಗಳ ಆಧಾರದ ಮೇಲೆ ವಿಭಾಗ ಮಟ್ಟದಲ್ಲಿ ಪ್ರಶ್ನೆ ಪತ್ರಿಕಾ ತಯಾರಿಕಾ ತರಬೇತಿ ಹೊಂದಿದ ಉಪನ್ಯಾಸಕರನ್ನು ಬಳಸಿಕೊಂಡು ಸಿದ್ದಪಡಿಸುವಂತೆ ಸೂಚಿಸಿದ್ದಾರೆ.
ಜಿಲ್ಲಾ ಮಟ್ಟದ ಉಪನಿರ್ದೇಶಕರು ತಮ್ಮ ವ್ಯಾಪ್ತಿಯಲ್ಲಿ ಬರುವ ಪಿಯು ಕಾಲೇಜುಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಪ್ರಶ್ನೆಪತ್ರಿಕೆಗಳನ್ನು ವಿತರಿಸಿ, ದಿನಾಂಕ 16-01-2024 ರಿಂದ ದಿನಾಂಕ 30-01-2024ರವರೆಗೆ ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸುವುದು. ಯಾವುದೇ ಲೋಪ ಆಗದಂತೆ ಎಚ್ಚರಿಕೆ ವಹಿಸಿ, ಗೌಪ್ಯತೆಯಿಂದ ಪರೀಕ್ಷೆ ನಡೆಸುವಂತೆ ಖಡಕ್ ಸೂಚನೆ ನೀಡಿದ್ದಾರೆ.
No comments:
Post a Comment
If You Have any Doubts, let me Comment Here