KREIS Addmission Online Application Last date 2023
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಮೊರಾರ್ಜಿ ದೇಸಾಯಿ/ ಏಕಲವ್ಯ ಮಾದರಿ/ ಅಟಲ್ ಬಿಹಾರಿ ವಾಜಪೇಯಿ/ ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 2024-25ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ/ ಡಾ. ಬಿ. ಆರ್. ಅಂಬೇಡ್ಕರ್/ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳಿಗೆ 2024-25ನೇ ಶೈಕ್ಷಣಿಕ ವರ್ಷದ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊಡಿಸಿದೆ. ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ, ಅರ್ಹತೆಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯಾ ವಸತಿ ಶಾಲೆಗಳ ಪ್ರಾಚಾರ್ಯರಿಂದ ಅರ್ಜಿ ಪಡೆದು ಭರ್ತಿ ಮಾಡಿ ಯಾವುದಾದರು ವಸತಿ ಶಾಲೆಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಮೊದಲು ಅರ್ಜಿ ಸಲ್ಲಿಕೆಗೆ ಡಿಸೆಂಬರ್ 31 ಕೊನೆಯ ದಿನವಾಗಿತ್ತು. ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ತುಂಬುವುದು ಹೇಗೆ? ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ; ಪ್ರಸ್ತುತ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರ ಪತ್ರದ ಅನ್ವಯ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 6, 2024ರ ತನಕ ಅವಕಾಶ ನೀಡಲಾಗಿದೆ. ಇಲ್ಲಿವರೆಗೆ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಶಾಲೆ-ಕಾಲೇಜುಗಳಿಗೆ ಉಚಿತ ವಿದ್ಯುತ್; ಸರ್ಕಾರದ ಆದೇಶ, ವಿವರ ರಾಜ್ಯ ಸರ್ಕಾರ ಸ್ಥಾಪನೆ ಮಾಡಿರುವ ವಸತಿ ಶಾಲೆಗಳಲ್ಲಿ 6 ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುತ್ತದೆ. ವಸತಿ ಶಾಲೆಗಳಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಅಂದರೆ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರವೇಶವಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ರೂ. 2.50 ಲಕ್ಷಗಳು ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅವರಿಗೆ ರೂ. 1 ಲಕ್ಷಗಳ ಆದಾಯ ಮಿತಿ ನಿಗದಿ ಮಾಡಲಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಶೇ.50 ರಷ್ಟು ಸೀಟುಗಳು ವಿದ್ಯಾರ್ಥಿನಿಯರಿಗೆ ಲಭ್ಯವಿರುತ್ತದೆ. ಒಮ್ಮೆ ಈ ವಸತಿ ಶಾಲೆಗಳಿಗೆ ವಿದ್ಯಾರ್ಥಿ ಸೇರಿದಲ್ಲಿ 10ನೇ ತರಗತಿಯವರೆಗೆ ಉಚಿತವಾಗಿ ವಿದ್ಯಾಭ್ಯಾಸ ಮಾಡಬಹುದಾಗಿದೆ. ಪ್ರವೇಶ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡುವುದು ಕಡ್ಡಾಯವಾಗಿದೆ. ವಸತಿ ಶಾಲೆಗಳ ಪ್ರವೇಶಕ್ಕಾಗಿ ಪ್ರಸ್ತುತ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಮೊರಾರ್ಜಿ ದೇಸಾಯಿ/ ಏಕಲವ್ಯ ಮಾದರಿ/ ಅಟಲ್ ಬಿಹಾರಿ ವಾಜಪೇಯಿ/ ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 2024-25ನೇ ಸಾಲಿನಲ್ಲಿ 6ನೇ ತರಗತಿಗೆ 50 ವಿದ್ಯಾರ್ಥಿಗಳನ್ನು ಅಟಲ್ ಬಿಹಾರಿ ವಾಜಪೇಯಿ ಶಾಲೆಗಳಲ್ಲಿ 6ನೇ ತರಗತಿ 80 ವಿದ್ಯಾರ್ಥಿಗಳನ್ನು ಮಾತ್ರ ಸೇರಿಸಿಕೊಳ್ಳಲಾಗುತ್ತದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಿದ ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ಪ್ರವೇಶ ಪರೀಕ್ಷೆ ಫೆಬ್ರವರಿ 18 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ. ತಾಲ್ಲೂಕು ಕೇಂದ್ರಗಳಲ್ಲಿ ಈ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಅರ್ಹತೆ ಮತ್ತು ಮೀಸಲಾತಿಯಂತೆ ಪಟ್ಟಿ ತಯಾರಿಸಿ, ಮೆರಿಟ್ ಆಧಾರದ ಮೇಲೆ ಮೀಸಲಾತಿ ಅನ್ವಯ ಆಯ್ಕೆ ಮಾಡಲಾಗುತ್ತದೆ. ಆಸಕ್ತ ವಿದ್ಯಾರ್ಥಿಗಳು ತಮ್ಮ ಸ್ವಂತ ಜಿಲ್ಲೆಯಲ್ಲಿರುವ ಎಲ್ಲಾ ವಸತಿ ಶಾಲೆಗಳಿಗೆ ಪ್ರವೇಶ ಪಡೆಯಲು ಮೀಸಲಾತಿಗನುಗುಣವಾಗಿ ಅರ್ಹರಾಗಿರುತ್ತಾರೆ.
No comments:
Post a Comment
If You Have any Doubts, let me Comment Here