KSET EXAM 2023 POSTPONED
ಕರ್ನಾಟಕ ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2023 (ಕೆಸೆಟ್-2023) ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುತ್ತಿದ್ದು, ದಿನಾಂಕ 31-12-2023 (ಭಾನುವಾರ)ರಂದು ನಿಗದಿಗೊಳಿಸಿದ್ದ ಪರೀಕ್ಷಾ ದಿನಾಂಕವನ್ನು ಪರಿಷ್ಕರಿಸಿ ದಿನಾಂಕ 13.01.2024 (ಶನಿವಾರ) ಕ್ಕೆ ಮುಂದೂಡಲಾಗಿದೆ.
ಆನ್‌ಲೈನ್ ಅರ್ಜಿಯಲ್ಲಿ ವಿಕಲ ಚೇತನ ಮೀಸಲಾತಿಯನ್ನು ಕೋರಿರುವ ಅಭ್ಯರ್ಥಿಗಳು, ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಲಿಂಕ್‌ನಲ್ಲಿ ಅರ್ಜಿದಾರರ ವಿವರಗಳು ಮತ್ತು ಲಿಪಿಕಾರರ ವಿವರಗಳನ್ನು ಕಡ್ಡಾಯವಾಗಿ ಸಲ್ಲಿಸತಕ್ಕದ್ದು. ಅರ್ಜಿದಾರರ ಮತ್ತು ಲಿಪಿಕಾರರ ವಿವರಗಳನ್ನು ಸಲ್ಲಿಸದ ವಿಕಲ ಚೇತನ ಅಭ್ಯರ್ಥಿಗಳು ಲಿಪಿಕಾರರ ಸೇವೆಯನ್ನು ಪಡೆಯಲು ಅರ್ಹರಿರುವುದಿಲ್ಲ. ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗೆ ಪರೀಕ್ಷಾ ಕೇಂದ್ರವಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕ್ರಮವಾಗಿ ಬೆಂಗಳೂರು ಮತ್ತು ತುಮಕೂರಿನಲ್ಲಿ ಪರೀಕ್ಷೆಗೆ ಹಾಜರಾಗತಕ್ಕದ್ದು. ಹೆಚ್ಚುವರಿಯಾಗಿ ಧಾರವಾಡ ಜಿಲ್ಲಾ ಪರೀಕ್ಷಾ ಕೇಂದ್ರಗಳಿಗೆ ಹಾವೇರಿ ಜಿಲ್ಲಾ ಪರೀಕ್ಷಾ ಕೇಂದ್ರಗಳನ್ನು ಮತ್ತು ಮೈಸೂರು ಜಿಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮಂಡ್ಯ ಜಿಲ್ಲಾ ಪರೀಕ್ಷಾ ಕೇಂದ್ರಗಳನ್ನು ಸೇರಿಸಲಾಗಿರುತ್ತದೆ. ಉಳಿದ ಜಿಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ ಅಂತ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
No comments:
Post a Comment
If You Have any Doubts, let me Comment Here