KSPSTA Request Letter for Appointment of Cleaning Staff in Government Schools
ಬಿಸಿಯೂಟ ಸಿಬ್ಬಂದಿ ಮಾದರಿಯಲ್ಲಿ ಸರ್ಕಾರಿ ಶಾಲೆಗಳ ಸ್ವಚ್ಛತೆಗಾಗಿ ಸಿಬ್ಬಂದಿಯನ್ನು ನೇಮಕ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ (State Primary School Teachers Association) ಅಧ್ಯಕ್ಷ ಕೆ. ನಾಗೇಶ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಮಂಗಳವಾರ ಮನವಿ ಸಲ್ಲಿಸಿದ್ದಾರೆ.
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಸ್ವಚ್ಛತೆಗಾಗಿ ಮಕ್ಕಳನ್ನು ಬಳಸುತ್ತಿದ್ದಾರೆ ಎಂಬ ಪ್ರಕರಣಗಳು ಬೆಳಕಿಗೆ ಬಂದು ಸಾಕಷ್ಟು ಗೊಂದಲದ ವಾತಾವರಣ ಸೃಷ್ಟಿಯಾಗಿದೆ. ಈ ಕಾರಣಕ್ಕಾಗಿ ಮುಖ್ಯ ಶಿಕ್ಷಕರನ್ನು ಅಮಾನತು ಮಾಡುವುದು ಹಾಗೂ ಪೊಲೀಸ್ ಕೇಸ್ ದಾಖಲಿಸುತ್ತಿರುವ ಘಟನೆಗಳು ಶಿಕ್ಷಕರನ್ನು ಬೆಚ್ಚಿಬಿಳಿಸುತ್ತಿವೆ.
ಈ ವಿಷಯದಲ್ಲಿ ಶಿಕ್ಷಕರ ಮೇಲೆ ಆಗುತ್ತಿರುವ ಈ ಕೃತ್ಯವನ್ನು ರಾಜ್ಯದ ಶಿಕ್ಷಕರ ಸಂಘಟನೆ ಅತ್ಯಂತ ಗಂಭೀರವಾಗಿ ವಿರೋಧಿಸುತ್ತಿದೆ ಹಾಗೂ ಶಾಲೆಗಳ ಸ್ವಚ್ಛತೆಯನ್ನು ಯಾರು ಮಾಡಬೇಕೆಂಬುದೇ ಅತ್ಯಂತ ಗಂಭೀರವಾಗಿ ಯೋಚಿಸಬೇಕಾಗಿದೆ. ಅದರಲ್ಲೂ ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್, ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಿರುವ ತಾವು, ರಾಜ್ಯದ ಸರ್ಕಾರಿ ಶಾಲೆಗಳ ಸ್ವಚ್ಛತೆಗಾಗಿ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಕೋರಿದ್ದಾರೆ.
KSPSTA ಮನವಿ ಪತ್ರದಲ್ಲಿರುವ ವಿಷಯಗಳು.
ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಗ್ರಾಮ ಪಂಚಾಯಿತಿಯಿಂದ ಸರ್ಕಾರಿ ಶಾಲೆಗಳ ಸ್ವಚ್ಛತೆಗಾಗಿ ವ್ಯವಸ್ಥೆ ಮಾಡಬೇಕು ಅಥವಾ ಹೊರ ಗುತ್ತಿಗೆ ಆಧಾರದ ಮೇಲೆ ಸ್ವಚ್ಛತೆಗಾಗಿ ಸಿಬ್ಬಂದಿಯನ್ನು ಬಿಸಿಯೂಟದ ಸಿಬ್ಬಂದಿ ಮಾದರಿಯಲ್ಲಿ ತೆಗೆದುಕೊಳ್ಳಲು ಅವಕಾಶ ಕಲ್ಪಿಸಬೇಕು.
ನಗರಸಭೆ, ಪಟ್ಟಣ ಪಂಚಾಯಿತಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು ಹಾಗೂ ಸಂಬಂಧಿಸಿದ ಇಲಾಖೆಗಳ ವ್ಯಾಪ್ತಿಗೆ ಬರುವ ಸ್ವಚ್ಛತಾ ಸಿಬ್ಬಂದಿಯಿಂದ ಶಾಲಾ ಸ್ವಚ್ಛತೆಯನ್ನು ನೆರವೇರಿಸಲು ವ್ಯವಸ್ಥೆ ಮಾಡಬೇಕು.
No comments:
Post a Comment
If You Have any Doubts, let me Comment Here