Notice for State Government Employees Union President C.S.Shadakshari suspension of membership
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿದ್ದಂತ ಸಿ.ಎಸ್ ಷಡಕ್ಷರಿ ಅವರನ್ನು ಶಿವಮೊಗ್ಗದಿಂದ ಕೋಲಾರ ಜಿಲ್ಲೆಗೆ ವರ್ಗಾವಣೆ ಮಾಡಿ, ಶಾಕ್ ನೀಡಲಾಗಿತ್ತು. ಈಗ ಅವರ ವರ್ಗಾವಣೆ ನಂತ್ರ, ರಾಜ್ಯ ಸರ್ಕಾರಿ ನೌಕರರ ಸಂಘದ ಸದಸ್ಯತ್ವವನ್ನು ಅಮಾನತಿನಲ್ಲಿ ಇಡೋದಕ್ಕೆ ಸೂಚಿಸಲಾಗಿದೆ.
ಈ ಮೂಲಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಕ್ಷರಿಗೆ ಮತ್ತೊಂದು ಶಾಕ್ ನೀಡಲಾಗಿದೆ.
ಈ ಕುರಿತಂತೆ ಸಹಕಾರ ಸಂಘಗಳ ಜಿಲ್ಲಾ ನೋಂದಣಾಧಿಕಾರಿ ಶಶಿಧರ.ಪಿ ಅವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಸಿ.ಎಸ್. ಷಡಕ್ಷರಿ, ಲೆಕ್ಕಾಧೀಕ್ಷಕರು. ಜಂಟಿ ನಿರ್ದೇಶಕರು, ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲ, ಶಿವಮೊಗ್ಗ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರನ್ನು ಉಪ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಕೋಲಾರ ಇಲ್ಲಿಗೆ ಖಾಲಿ ಇರುವ ಲೆಕ್ಕಾಧೀಕ್ಷಕರ ಹುದ್ದೆಗೆ ವರ್ಗಾಯಿಸಿ ಸ್ಥಳ ನಿಯುಕ್ತಿಗೊಳಿಸಲಾಗಿರುತ್ತದೆ. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೈಲಾ-ಉಪವಿಧಿ ಅನುಸಾರ "ಸದಸ್ಯತ್ವ ಮುಂದುವರಿಕೆಯನ್ನು ಸಿ.ಎಸ್ ಷಡಕ್ಷರಿ ಮುಂದಿನ ಅನ್ ಹೊಂದುವವರೆಗೆ-ವರ್ಗಾವಣೆಗೊಂಡ ಕಛೇರಿ ಕರ್ತವ್ಯಕ್ಕೆ ಹಾಜರಾಗುವವರೆಗೆ ಅಮಾನತ್ತಿನಲ್ಲಿಟ್ಟು ಸೂಕ್ತ ಆದೇಶ ಹೊರಡಿಸುವಂತೆ ಬಿ. ಗಂಗಾಧರ ರಾಜ್ಯ ಪರಿಷತ್ ಸದಸ್ಯರು. ಇವರು ವಿನಂತಿಸಿಕೊಂಡಿರುತ್ತಾರೆ ಎಂದು ತಿಳಿಸಿದ್ದಾರೆ.
No comments:
Post a Comment
If You Have any Doubts, let me Comment Here